33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಉಜಿರೆಯ ನ್ಯೂಟ್ರಿಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಾಲ್ಮಲಿ ಸುನಿಲ್ ಅವರು ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ಮಾನಸಿಕ ಆರೋಗ್ಯದ ಮಹತ್ವ, ಒತ್ತಡವನ್ನು ಹೇಗೆ ನಿರ್ವಹಿಸುವುದು ಎಂಬುದರ ಬಗ್ಗೆ ತಿಳಿಸಿದರು. ಮಾನಸಿಕ ಒತ್ತಡವನ್ನು (Stress) ಕಡಿಮೆ ಮಾಡಲು ನಿಯಮಿತ ವ್ಯಾಯಾಮ, ಆಳವಾದ ಉಸಿರಾಟದ ವ್ಯಾಯಾಮ (Deep Breathing), ಧ್ಯಾನ ಮತ್ತು ಯೋಗವನ್ನು ಅಭ್ಯಾಸ ಮಾಡಿ. ಸಮತೋಲಿತ ಆಹಾರ ಸೇವಿಸಿ, ಮೊಬೈಲ್ ಬಳಕೆಯನ್ನು ಮಿತಗೊಳಿಸಿ ಮತ್ತು ಸಾಕಷ್ಟು ನಿದ್ದೆ ಮಾಡುವುದರಿಂದ ಒತ್ತಡವನ್ನು ಸುಲಭವಾಗಿ ನಿರ್ವಹಿಸಬಹುದು ಎಂದು ಹೇಳಿದರು. ಉತ್ತಮ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರ ಪದ್ದತಿಯನ್ನು ಅನುಸರಿಸುವಂತೆ ಕರೆ ನೀಡಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಉಪಸ್ಥಿತರಿದ್ದರು . ಕಾರ್ಯಕ್ರಮವನ್ನು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ತ್ರಿಭುವನ್ ಜೈನ್ ಸ್ವಾಗತಿಸಿ , ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ನಿಖಿತ್ ಜೈನ್ ವಂದಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!