24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ :  ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹಾಗೂ ಡಾ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿದ್ದು ಹಾಗಾಗಿ ಪೂಜ್ಯರೊಂದಿಗೆ ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿ ರಾಜ್ಯಾಧಕ್ಷ ಪ್ರಣವಾನಂದರಾಮ್ ಮಹಾಸ್ವಾಮಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಪತ್ರ ನೀಡಿದರು.

ಅವರು ಜು. 10 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ್ ಸ್ವಾಮಿ ದರ್ಶನ ಪಡೆದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅವರನ್ನು ಸನ್ಮಾನಿಸಿದರು.

ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿ ಸನಾತನ ಧರ್ಮದ ಮೇಲೆ ಈ ಹಿಂದೆಯೂ ದಾಳಿ ನಡೆದಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆಯವರ ಪರ ಬೆಂಬಲ ಇದ್ದೇವೆ ಎಂಬುವುದನ್ನು ತಿಳಿಸುವುದಕ್ಕೆ ಬಂದಿದ್ದೇವೆ. 200 ಸ್ವಾಮೀಜಿಗಳು ಸೇರಿ  1 ಲಕ್ಷ ಮಂದಿಯ ಭಕ್ತ ಸಂಗಮವನ್ನು ಮಾಡುತ್ತೇವೆ. ಇದರ ಹಿಂದೆ ಇರುವ ದುಷ್ಟ ಶಕ್ತಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂಬುವುದಾಗಿ ಮುಖ್ಯ ಮಂತ್ರಿಗಳಿಗೆ ಆಗ್ರಹಿಸಿದರು.

ಭಾರತದ ಆಧ್ಯಾತ್ಮಿಕ ಕೇಂದ್ರಗಳಲ್ಲಿ ತುಂಬಾ ಪ್ರಸಿದ್ದಿಯನ್ನು ಪಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿರುವುದು ನಮಗೆಲ್ಲರಿಗೂ ಗೊತ್ತಿರುವ ವಿಷಯ. ಇವೆಲ್ಲವೂ ಸತ್ಯಕ್ಕೆ ದೂರವಾದ ಆರೋಪಗಳು ಆದ ಹಿನ್ನಲೆಯಲ್ಲಿ ದಿನಾಂಕಃ 27/28-ಜೂನ್ 2026 ರಂದು ಕಲ್ಬುರ್ಗಿಯಲ್ಲಿ ನಡೆದ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯ ಚಿಂತನ ಶಿಬಿರದಲ್ಲಿ 50ಕ್ಕೂ ಹೆಚ್ಚು ಅತಿ ಹಿಂದುಳಿದ ಸಮುದಾಯದ ಸ್ವಾಮೀಜಿಗಳು ಒಮ್ಮತದಿಂದ ಧರ್ಮಸ್ಥಳದ ಪರವಾಗಿ ನಿಲ್ಲಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ತೆಗೆದುಕೊಂಡ ನಿರ್ಣಯದಂತೆ ಈ ಬೆಂಬಲ ಪತ್ರವನ್ನು ಮಹಾಸಭೆಯಿಂದ ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಗೆ ಸಮರ್ಪಣೆ ಮಾಡುತ್ತೇವೆ. ನಾವೆಲ್ಲಾ ಅತಿ ಹಿಂದುಳಿದ ಸಮುದಾಯಗಳು ಕ್ಷೇತ್ರದ ಪರವಾಗಿ ಪ್ರಾಮಾಣಿಕವಾಗಿ ಇರುತ್ತೇವೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಈ ಪತ್ರದ ಮುಖಾಂತರ ತಿಳಿಸಲು ಬಯಸುತ್ತೇವೆ ಎಂದು ತಿಳಿಸಿದರು.

Related posts

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!