23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಮಹಿಳಾ ಸ್ನೇಹಿ ಗ್ರಾಮ ಪಂಚಾಯತ್ -ಮಹಿಳಾ ಸಬಲೀಕರಣ ಕಾರ್ಯಕ್ರಮದಡಿಯಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಹಾಗೂ ಮುಟ್ಟಿನ ಕಪ್ ಬಳಕೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಇವರು ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ, ಮುಟ್ಟಿನ ಕಪ್ ಬಳಕೆಯ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಸ್ತ್ರೀ ಶಕ್ತಿ ಗೊಂಚಲಿನ ಕಾರ್ಯದರ್ಶಿ ವಸಂತಿ, ಕೋಶಾಧಿಕಾರಿ ಶ್ರೀಜಾ ಉಪಸ್ಥಿತರಿದ್ದರು. ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ಎಲ್ ಸಿ ಆರ್ ಪಿ ಪುಷ್ಪಾವತಿ ಅಧ್ಯಕ್ಷತೆ ವಹಿಸಿದ್ದರು. ಸ್ತ್ರೀ ಶಕ್ತಿ ಗೊಂಚಲಿನ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಕಸ್ತೂರಿರಂಗನ್ ವರದಿ ವಿರೋಧಿಸಿ ಮಲವಂತಿಗೆಯಲ್ಲಿ ಪ್ರತಿಭಟನೆ

Suddi Udaya
error: Content is protected !!