32.8 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯ ಚಟುವಟಿಕೆಗಳನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಧ್ಯಾಪಕ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಪ್ರಶಾಂತ್ ಬಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಎನ್ ಎಸ್ ಎಸ್ ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಎನ್ ಎಸ್ ಎಸ್ ಚಟುವಟಿಕೆಗಳಲ್ಲಿ ಕ್ರೀಯಾಶೀಲರಾಗಿ ಪಾಲ್ಗೊಂಡಾಗ ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳಲು ಸಾಧ್ಯ. ಸಮಾಜದೊಂದಿಗೆ ಬೆರೆತು ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಬಹುದು “ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ರವರು ” ರಾಷ್ಟ್ರೀಯ ಸೇವಾ ಯೋಜನೆ ಸದೃಢ ಯುವ ಜನತೆಯಯನ್ನು ಸೃಷ್ಟಿಸುತ್ತದೆ. ಅರೋಗ್ಯವಂತ ರಾಷ್ಟ ನಿರ್ಮಾಣ ಮಾಡುವಲ್ಲಿ ಎನ್ ಎಸ್ ಎಸ್ ಅತ್ಯವಶ್ಯಕ. ರಾಷ್ಟ್ರೀಯ ಸೇವಾ ಯೋಜನೆ ಮೂಲಕ ಸ್ವಯಂ ಸೇವಕರು ಪಡೆವ ಅನುಭವ ಮುಂದಿನ ಜೀವನಕ್ಕೆ ಉತ್ತಮ ಅಡಿಪಾಯ “ಎಂದು ಹೇಳಿದರು.

ಇದೇ ಸಂದರ್ಭ ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿದ್ದ ಹಿರಿಯ ಸ್ವಯಂ ಸೇವಕ ಸುದರ್ಶನ್ ನಾಯಕ್ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 586 ಅಂಕಗಳನ್ನು ಪಡೆದ ಸ್ವಯಂ ಸೇವಕಿ ಗ್ರಂಥ ಇವರನ್ನು ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿ ಸದಸ್ಯರಾದ ನಾಗರಾಜ್ ಭಂಡಾರಿ, ಪ್ರಸನ್ನ ಕುಮಾರ್ ಐತಾಳ್, ಕನ್ನಡ ಉಪನ್ಯಾಸಕ ಸುಭಾಸ್ ರಾವ್ ಬೋಳೂರು ಉಪಸ್ಥಿತರಿದ್ದರು.


ಸ್ವಯಂ ಸೇವಕಿ ಅನ್ವಿತಾ ನಿರೂಪಿಸಿ ಘಟಕ ನಾಯಕಿ ನವನೀತು ಸ್ವಾಗತಿಸಿ ನಾಯಕ ವಿಶ್ವಾಸ್ ಧನ್ಯವಾದವಿತ್ತರು.

Related posts

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya
error: Content is protected !!