34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಟೇಬಲ್ ಟೆನ್ನಿಸ್ ತರಬೇತಿ ಉದ್ಘಾಟನೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಕ್ರೀಡಾ ಕೌಶಲ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಟೇಬಲ್ ಟೆನ್ನಿಸ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಐ.ಟಿ.ಟಿ.ಎಫ್. ಕೋಚ್ ಅಶ್ವಿನ್ ಕುಮಾರ್ ಪಡುಕೋಣೆ ಉದ್ಘಾಟಿಸಿ ಮಾತನಾಡಿ, ಟೇಬಲ್ ಟೆನ್ನಿಸ್ ಕ್ರೀಡೆಯು ದೈಹಿಕ ಸಾಮರ್ಥ್ಯದ ಜೊತೆಗೆ ಏಕಾಗ್ರತೆ, ಚುರುಕುತನ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಕ್ರೀಡೆಯಲ್ಲೂ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೋಚ್‌ಗಳಾದ ನಿತೀಶ್ ಹಾಗೂ ಪವನ್, ಎಸ್.ಡಿ.ಎಮ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾ ಕಾರ್ಯದರ್ಶಿ ರಮೇಶ್ ಎಚ್., ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶಾರದ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ವಹಿಸಿದ್ದರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್ ಅವರ ಸಂಯೋಜನೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಿಕ್ಷಕಿ ಸುಜನಾ ವಾಲ್ತಾಜೆ ನಿರೂಪಿಸಿದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya
error: Content is protected !!