34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ, ದೃಢ ಸಂಕಲ್ಪ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮನೋಭಾವ ಅತ್ಯಗತ್ಯ ಎಂದು ಉಜಿರೆಯ ಸಂಧ್ಯಾ ಟ್ರೇಡರ್ಸ್‌ನ ಮಾಲಕರು ಹಾಗೂ ಸಿರಿ ಸಂಸ್ಥೆಯ ನಿರ್ದೇಶಕರಾದ ಶ್ರೀ ರಾಜೇಶ್ ಪೈ ಅವರು ಹೇಳಿದರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾದ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿದರು. ತಮ್ಮ ಉದ್ಯಮ ಪಯಣದ ಅನುಭವಗಳನ್ನು ಹಂಚಿಕೊಂಡ ಅವರು, ಉದ್ಯಮದ ಬೆಳವಣಿಗೆ, ಸವಾಲುಗಳನ್ನು ಎದುರಿಸುವ ಬಗೆ ಹಾಗೂ ಯಶಸ್ಸಿನ ಸೂತ್ರಗಳ ಕುರಿತು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ ಕುಮಾರ್ ಅವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿ, ಉದ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಅವರು ಮಾತನಾಡಿ, ಇಂದಿನ ಆಧುನಿಕ ತಂತ್ರಜ್ಞಾನಗಳನ್ನು ಸಮರ್ಥವಾಗಿ ಬಳಸಿಕೊಂಡು ಉದ್ಯಮದಲ್ಲಿ ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು.

ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮವು ಭೂಮಿಕಾ ಹಾಗೂ ವೈಷ್ಣವಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಸ್ವಾತಿಕ್ ಹೆಬ್ಬಾರ್ ಹಾಗೂ ಕುಮಾರಿ ಅನನ್ಯ ಟಿ. ಅವರು ತರಬೇತಿಯ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕರುಣಾಕರ್ ಕೆ. ಜೈನ್ ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಅಹಿಂಸಾ ಡಿಸೈನರ್ ಬೂಟಿಕ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya
error: Content is protected !!