34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

ಕಕ್ಯ ಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯನ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ವನ್ನು ಜಾಥಾದ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಈ ಜಾಥವನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ , ಸಂಯೋಜಕರಾದ ಯಶವಂತ್ ಜಿ ನಾಯಕ್ ಮತ್ತು ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯ ಕೆ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಎಲ್ . ಸಿ ಆರ್ ವಿದ್ಯಾಸಂಸ್ಥೆಯಿಂದ ಕಕ್ಯಪದವಿನ ಉಳಿಗ್ರಾಮ ಪಂಚಾಯತ್ ರವರೆಗೆ ಜಾಥಾ ಕಾರ್ಯಕ್ರಮವನ್ನು ಘೋಷ ವಾಕ್ಯದೊಂದಿಗೆ ಜಾಗೃತಿಯನ್ನು ಮೂಡಿಸಲಾಯಿತು. ಹಾಗೂ ಇದಕ್ಕೆ ಸಂಬಂಧಿಸಿದ ಕಿರುಚಿತ್ರವನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಿ ಅದರ ಮಾದಕ ವ್ಯಸನದ ಆಗೂ ಹೋಗುಗಳ ಕುರಿತು ಎಲ್ಲಾ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಸಲಾಯಿತು. ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದಿಂದ ಮುಕ್ತರಾಗಿ ಉತ್ತಮವಾದ ಜೀವನ ಶೈಲಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿಗಳಾದ ನೀವು ಇಂತಹ ಮಾದಕ ವಸ್ತುಗಳಿಂದ ದೂರವಿದ್ದಲ್ಲಿ ಉತ್ತಮ ಜೀವನ ಸಾಧ್ಯ ಎಂದು ಪ್ರಾಥಮಿಕ ವಿಭಾಗದ ಸಹ ಶಿಕ್ಷಕರಾದ ಪ್ರಶಾಂತ್ . ಕೆ ತಿಳಿಸಿದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿಯಾದ ಸಂಗೀತ ನಿರೂಪಿಸಿ ವಂದಿಸಿದರು. ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

Suddi Udaya
error: Content is protected !!