23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತಿದ್ದು ನದಿ ದಾಟುವುದು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಹಾಕುವ ಮೂಲಕ ಮೂಲನಿವಾಸಿಗಳಿಗೆ ದಿಗ್ಬಂಧನ ವಿಧಿಸುವ ಕಾರ್ಯವನ್ನು ಇಲಾಖೆಗಳು ಮಾಡಿದೆ.

ಸವಣಾಲು ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಎಂಬಲ್ಲಿ 9 ಆದಿವಾಸಿ ಮಲೆಕುಡಿಯ ಕುಟುಂಬಗಳು ಎರಡು ಶತಮಾನಗಳಿಂದ ವಾಸಿಸುತ್ತಿವೆ‌. ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಜೀವಿಸುತ್ತಿರುವ ಕುಟುಂಬಗಳು ವಿದ್ಯುತ್ , ರಸ್ತೆ , ಸೇತುವೆ ಮುಂತಾದ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸ್ವಾತಂತ್ರ್ಯ ಲಭಿಸಿ 79 ವರ್ಷಗಳಾದರೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಫಲವಾದ ಆಡಳಿತ ವ್ಯವಸ್ಥೆ ಇದೀಗ ಸಂಪರ್ಕ ಕೊಂಡಿಯಾಗಿರುವ ಇಲ್ಲಿ ನದಿಯನ್ನೇ ದಾಟಬಾರದು ಎಂದು ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತಗನವನ್ನು ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆ ಮಾಡಿದೆ.

ಕಳೆದ ವರ್ಷ ಯುವಕರು ನದಿ ನೀರಿನ ರಭಸಕ್ಕೆ ದ್ವಿಚಕ್ರ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಅದೃಷ್ಟವಶಾತ್ ಬದುಕಿ ಬಂದಿದ್ದರು. ಆ ಸಂದರ್ಭದಲ್ಲಿ ತಾಲೂಕು , ಜಿಲ್ಲಾ ಆಡಳಿತದ ಅಧಿಕಾರಿಗಳು ಸೇರಿದಂತೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಿತ್ತಿಲಪೇಲಕ್ಕೆ ಭೇಟಿ ನೀಡಿದ್ದರು. ಸ್ಥಳೀಯ ನಿವಾಸಿಗಳು ಅಧಿಕಾರಿಗಳ ಜನಪ್ರತಿನಿಧಿಗಳ ಮುಂದೆ ತಮಗೆ ಕನಿಷ್ಟ ಸಂಪರ್ಕಕ್ಕೆ ಒಂದು ಸೇತುವೆ ನಿರ್ಮಿಸಿಕೊಡಿ ಎಂಬ ಬೇಡಿಕೆ ಇಟ್ಟಿದ್ದರು. ಅತ್ಯಂತ ತುತ್ತಾಗಿ ಸೇತುವೆ ನಿರ್ಮಾಣ ಮಾಡುವ ಬಗ್ಗೆ ಎಲ್ಲರೂ ಭರವಸೆ ನೀಡಿದ್ದರು. ಆದರೆ ಇಲ್ಲಿಯ ತನಕವೂ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಕೆಲಸಗಳು ನಡೆದಿಲ್ಲ. ಅಧಿಕಾರಿಗಳು , ಜನಪ್ರತಿನಿಧಿಗಳು ನೀಡಿದ ಭರವಸೆಗಳು ಇಲ್ಲಿಯ ತನಕವೂ ಈಡೇರಿಲ್ಲ.
ಇದೀಗ ಭಾರೀ ಮಳೆಯಿಂದಾಗಿ ಇಲ್ಲಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮೂಲನಿವಾಸಿಗಳು ಈ ನದಿಯನ್ನು ದಾಟಿಯೇ ಹೊರ ಪ್ರಪಂಚಕ್ಕೆ ಬರಬೇಕಾಗಿದೆ. ಕೂಲಿ ಕೆಲಸಕ್ಕೆ ಹೋಗಲು, ದಿನನಿತ್ಯದ ಅಗತ್ಯ ವಸ್ತಗಳನ್ನು ತರಲು ಇವರಿಗೆ ಇದೊಂದೇ ದಾರಿಯಗಿದೆ. ಸೇತುವೆ ನಿರ್ಮಿಸಲು ಮುಂದಾಗದ ಅಧಿಕಾರಿಗಳು ಇದೀಗ ನದಿ ದಾಟಬಾರದು ಎಂಬ ಬ್ಯಾನರ್ ಅಳವಡಿಸಿದ್ದಾರೆ.

“ಆದಿವಾಸಿ ಸಮುದಾಯವನ್ನು ಜನಪ್ರತಿನಿಧಿಗಳು ಕೇವಲ ಓಟ್ ಬ್ಯಾಂಕ್ ಆಗಿ ದುರುಪಯೋಗ ಮಾಡಿಕೊಂಡಿದೆ. ಆದಿವಾಸಿಗಳ ಯಾವುದೇ ಅಭಿವೃದ್ಧಿ ಅವರಿಗೆ ಬೇಕಾಗಿಲ್ಲ. ಅಧಿಕಾರಿಗಳು ನಮ್ಮ ಸಮುದಾಯಕ್ಕೆ ಸುಳ್ಳು ಭರವಸೆ ನೀಡಿ ಮೋಸ ಮಾಡುತ್ತಿದೆ. ಒಟ್ಟಾರೆಯಾಗಿ ಮಲೆಕುಡಿಯ ಸಮುದಾಯವನ್ನು ಗೊಂಬೆಯಾಟದಂತೆ ಬಳಸುತ್ತಿದ್ದಾರೆ. ನದಿ ದಾಟಬಾರದು ಎಂದು ಸೂಚನಾ ಫಲಕ ಹಾಕಿರುವ ಅಧಿಕಾರಿಗಳು ಈ ಆದಿವಾಸಿ ಕುಟುಂಬಗಳು ಹೇಗೆ ಬದುಕಬೇಕು ಎಂಬುದನ್ನು ಹೇಳಬೇಕಾಗಿದೆ ಅವರ ದಿನನಿತ್ಯದ ಅಗತ್ಯಗಳಿಗಾಗಿ ಸರಕಾರ ಯಾವ ಕ್ರಮ ಕೈಗೊಳ್ಳದೆ ಹೀಗೆ ದಿಗ್ಬಂಧನ ವಿಧಿಸುವುದು ಎಷ್ಟು ಸರಿ, ಇಂತಹ ಮೋಸದ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನೆ ನಡೆಸಬೇಕಾಗುತ್ತದೆ”
-ಜಯಾನಂದ ಪಿಲಿಕಲ , ಪ್ರಧಾನ ಕಾರ್ಯದರ್ಶಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

Suddi Udaya
error: Content is protected !!