34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ವತಿಯಿಂದ ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಅರಿವು ಕಾರ್ಯಕ್ರಮ ವನ್ನು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿ, ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ತಿಳಿದು ಕಾನೂನು ಪಾಲಿಸುವ ಆದರ್ಶ ನಾಗರಿಕರಾಗಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ಉಚ್ಚ ನ್ಯಾಯಾಲಯದ ವಕೀಲರಾದ ಜಿತಿನ್ ಜಿಜೋ ಅವರು ಭಾಗವಹಿಸಿ, ಮಕ್ಕಳ ಲೈಂಗಿಕ ಕಿರುಕುಳ ತಡೆ ಕಾಯಿದೆ (ಪೋಕ್ಸೊ ), ಕೆಲಸದ ಸ್ಥಳಗಳಲ್ಲಿ ಹೆಣ್ಣು ಮಕ್ಕಳ ಕಿರುಕುಳ ವಿರುದ್ಧದ ಕಾನೂನು, ಮಾದಕ ವಸ್ತುಗಳ ದುರುಪಯೋಗ ಮತ್ತು ಅದರ ಪರಿಹಾರ ಕ್ರಮಗಳು, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾನೂನುಗಳು ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಉಪನ್ಯಾಸ ನೀಡಿದರು.

ಕಾನೂನು ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ ಎನ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾನೂನು ಸಾಕ್ಷರತಾ ಸಂಘ ಆಯೋಜಿಸಿದ್ದ ಪೋಸ್ಟರ್ ಡ್ರಾಯಿಂಗ್ ಮೇಕಿಂಗ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಎನ್.ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರಥಮ ಕಲಾ ವಿಭಾಗದ ಕುಮಾರಿ ಜೊವಿಟಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕಾನೂನು ಸಾಕ್ಷರತಾ ಸಂಘದ ವಿದ್ಯಾರ್ಥಿ ಪ್ರತಿನಿಧಿಯಾಗಿರುವ ಕುಮಾರಿ ಸುಮಶ್ರೀ ಅವರು ವಂದನಾರ್ಪಣೆ ಸಲ್ಲಿಸಿದರು..

Related posts

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!