23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಿಷಯವಾರು ಸಂಘಗಳು ಮತ್ತು ಸ್ವಾಗತ ಕಾರ್ಯಕ್ರಮಗಳ ಉದ್ಘಾಟನೆ

ಉಜಿರೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ಸ್ವಾಗತ ಕಾರ್ಯಕ್ರಮ, ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಸಮಾರಂಭ ಜು.10 ರಂದು ನಡೆಯಿತು.

ಮುಖ್ಯ ಅತಿಥಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸಾವಿತ್ರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ. ನಮ್ಮ ರಾಷ್ಟ್ರದ ಪ್ರಗತಿಗೆ ವಿದ್ಯಾವಂತರು ಮಾತ್ರವಲ್ಲ ಮೌಲ್ಯವಂತರೂ ಕೂಡಾ ಅಗತ್ಯ. ಆದ್ದರಿಂದ ಸತ್ಯ, ಪ್ರಾಮಾಣಿಕತೆ, ಶಿಸ್ತು, ದೇಶಪ್ರೇಮ ಮತ್ತು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ಆತ್ಮವಿಶ್ವಾಸ ಸದಾ ನಿಮ್ಮಲ್ಲಿ ತುಂಬಿರಲಿ ಎಂದು ಹೇಳಿದರು. ಪ್ರಸ್ತುತವಾಗಿ ಪ್ರಾಥಮಿಕ ಶಾಲೆಗಳಲ್ಲಿ ಮೌಲ್ಯಗಳನ್ನು ಒಳಗೊಂಡ ಪಠ್ಯಕ್ರಮವನ್ನು ಮಗುವಿನ ಸರ್ವತೋಮುಖವಾದ ಬೆಳವಣಿಗೆಗೆ ಅನುಗುಣವಾಗಿ ಸೇರಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ “ಸೇವಾ ಮನೋಭಾವಕ್ಕೆ ಹೊಸ ದಿಕ್ಕನ್ನು ನೀಡುವ ಮಹತ್ವದ ಘಟ್ಟವಾಗಿದೆ. ಈ ಘಟ್ಟವು ವಿದ್ಯಾರ್ಥಿ ಜೀವನದ ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಅಮೂಲ್ಯವಾದ ಸಮಯ. ಈ ಹಂತದಲ್ಲಿ ವಿದ್ಯಾರ್ಥಿಯು ಗಳಿಸಿಕೊಳ್ಳುವ ಜ್ಞಾನ, ಕೌಶಲ್ಯ, ಮೌಲ್ಯಗಳು ಮತ್ತು ಅನುಭವಗಳು ಜೀವನದ ಭದ್ರ ಬುನಾದಿಯಾಗಬಲ್ಲದು ಎಂದು ಹೇಳಿದರು. ವಿದ್ಯಾರ್ಥಿ ಸಂಘದ ವಿವಿಧ ವಿಭಾಗಗಳಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ಸಹಾಯಕ ಪ್ರಾಧ್ಯಾಪಕ ಮಂಜು ಆರ್ ಮಾತನಾಡಿ ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಧ್ವನಿಯಾಗಿದೆ. ಇಲ್ಲಿ ಪ್ರತಿಯೊಬ್ಬರು ನಾಯಕತ್ವ ಮತ್ತು ಸಂಘಟನೆಯ ಗುಣಗಳನ್ನು ಬೆಳೆಸಿಕೊಳ್ಳುತ್ತಾರೆ. ನೀವೆಲ್ಲರೂ ದೊಡ್ಡ ದೊಡ್ಡ ಕನಸುಗಳನ್ನು ಕಾಣಿರಿ. ಆದರ್ಶ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಪ್ರಾಸ್ತವಿಕ ನುಡಿಗಳನ್ನು ತಿಳಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕಿ ದೀಪಿಕಾ ಹಾಗೂ ಉಪನಾಯಕಿ ಫಾತಿಮಾತ್ ಸಫಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು, ಪ್ರಥಮ ಮತ್ತು ದ್ವಿತೀಯ ಡಿ.ಎಡ್. ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿಗಳಾದ ಯಜ್ಞಶ್ರೀ ಮತ್ತು ತಂಡ ಪ್ರಾರ್ಥಿಸಿ, ಸುಮಯ್ಯ ಸ್ವಾಗತಿಸಿ, ರಂಝೀನಾ ವಂದಿಸಿ, ಹುಲಿಗೆವ್ವ ಅತಿಥಿ ಪರಿಚಯ ಮಾಡಿದರು. ಶಿಫಾನ ಮತ್ತು ರಾಯಿಝ ಕಾರ್ಯಕ್ರಮ ನಿರೂಪಿಸಿದರು.

Related posts

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ವಿವೇಕ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!