August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಗೆ ಕೆ.ಪಿ.ಎಸ್ ಸ್ಥಾನಮಾನ; ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಆಧುನಿಕ ಮೂಲಸೌಕರ್ಯ ಮತ್ತು ಉತ್ತಮ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

ಕೆಪಿಎಸ್ ಆಗಿ ಮೇಲ್ದರ್ಜೆಗೇರಿಸಲಾದ ಶಾಲೆಗಳು:

  • ನಿಟ್ಟಡೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ನಿಟ್ಟಡೆ.
  • ಕರಾಯ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕರಾಯ.
  • ಬಂಗಾಡಿ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾಡಿ–1.
  • ಪುತ್ತಿಲ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಾರ್ಯ.
  • ಬಂಗಾಡಿ– ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ನಾವೂರು.
  • ಅಣಿಯೂರು–ಕಕ್ಕಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಯಲು.
  • ನಿಡ್ಲೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾಡಿ.
  • ಗುರುವಾಯನಕೆರೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ.
  • ಆಂಡಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಸಾವ್ಯ.
  • ಅಣಿಯೂರು–ಕಕ್ಕಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ತೋಟತ್ತಾಡಿ.
  • ಮುಂಡಾಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕಿಲ್ಲೂರು.

ಕರ್ನಾಟಕ ಸರ್ಕಾರದ ಈ ನಿರ್ಧಾರದಿಂದ ಬೆಳ್ತಂಗಡಿ ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಹೊಸ ಉತ್ತೇಜನ ದೊರೆಯಲಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ನಗರ ಮಟ್ಟದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವಲ್ಲಿ ಕೆಪಿಎಸ್ ಯೋಜನೆ ಮಹತ್ವದ ಹೆಜ್ಜೆಯಾಗಲಿ ಮತ್ತು ಕೆಪಿಎಸ್ ಶಾಲೆಗಳು ಮೇಲ್ದರ್ಜೆಗೆರಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಅಭಿನಂದನೆ ತಿಳಿಸಿದ್ದಾರೆ.

Related posts

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya
error: Content is protected !!