28.4 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45) ಎಂಬವರಾಗಿದ್ದಾರೆ.ಇವರು ಜು.7ರಂದು ಬೆಳ್ತಂಗಡಿ ತಾಲೂಕಿನ ನಾರಾವಿ ಅರಸಿಕಟ್ಟೆ ನಿವಾಸಿ ರವಿರಾಜ್ ಜೈನ್ ಎಂಬವರ ಮನೆಗೆ ರೊಟ್ಟಿ ಮಾಡಲು ಬಂದಿದ್ದರು. ಮದ್ಯಾಹ್ನದ ವರೆಗೆ ಕೆಲಸ ಮಾಡಿ ಬಳಿಕ ಅವರು ಅಲ್ಲಿಂದ‌ ಹಿಂತಿರುಗಿದ್ದರು ಆದರೆ ಅಂದು ಪ್ರಭಾಕರ ಶೆಟ್ಟಿ ಮರಳಿ ಮನೆ ಸೇರಿರಲಿಲ್ಲ. ಆತನಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳು ಸಿಗದ ಹಿನ್ನಲೆಯಲ್ಲಿ ಈ ಬಗ್ಗೆ ಹೆಬ್ರಿ ಪೊಲೀಸರಿಗೆ ದೂರು ನೀಡಲಾಗಿತ್ತು.ಉಮೇಶ್‌ ಎಂಬವರು ನೀಡಿದ ದೂರಿನಂತೆ ಪ್ರಕರಣ‌ದಾಖಲಿಸಿಕೊಂಡ ಪೊಲೀಸರು ಪ್ರಕರಣವನ್ನು ಬೆಳ್ತಂಗಡಿಯ ವೇಣೂರು ಠಾಣೆಗೆ ವರ್ಗಾಯಿಸಿದ್ದರು.

ಇದೀಗ ಜು.12 ರಂದು ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದುವಿನ ನಿವಾಸಿ ವಿಘ್ನೇಶ್ ಭಟ್ ಎಂಬವರ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಪ್ರಭಾಕರ ಶೆಟ್ಟಿಯ ಮೃತದೇಹ ಪತ್ತೆಯಾಗಿದೆ.ಸ್ಥಳಕ್ಕೆ ಪೊಲೀಸರು‌ ತೆರಳಿ ಪರಿಶೀಲನೆ ನಡೆಸಿದ್ದು ಈತ ಯಾವ ರೀತಿ ಮೃತಪಟ್ಟಿರಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ಪ್ರಭಾಕರ ಒಂದಿಷ್ಟು ಮಾನಸಿಕ ಸಮಸ್ಯೆಯಿಂದ‌ ಬಳಲುತ್ತಿದ್ದ ಎನ್ನಲಾಗಿದ್ದು ಪೊಲೀಸರ ತನಿಖೆಯಿಂದಷ್ಟೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ

Related posts

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!