28.4 C
ಪುತ್ತೂರು, ಬೆಳ್ತಂಗಡಿ
October 12, 2026
ತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 586ನೇ ಸೇವಾ ಯೋಜನೆಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಕುತ್ಯಾರು ಹೊಸಮನೆ ಸಪರಿವಾರ ನಾಗಬ್ರಹ್ಮಾದಿ ಕ್ಷೇತ್ರ ರೆಂಕೆದಗುತ್ತುನಲ್ಲಿ ಜು.12ರಂದು ನಡೆಯಿತು.

ಅಧ್ಯಕ್ಷತೆಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಜಗದೀಶ್ ಲಾಯಿಲ ವಹಿಸಿದರು.
ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಡಿ ವೈ ಎಸ್ ಪಿ ರೋಹಿನಿ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಉದ್ಯಮಿ ಹಳ್ಳಿ ಮನೆ ಮಾಲಕರಾದ
ಪ್ರವೀಣ್ ಫೆರ್ನಾಂಡಿಸ್, ಉಜಿರೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾದ ತುಕರಾಮ್ ಬಿ., ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಮನೋಹರ ಬಳಂಜ, ಜ್ಯೂಸ್ ಜಂಕ್ಷನ್ ಮಾಲಕರದ ದಿನೇಶ್ ಶೆಟ್ಟಿ, ಕುತ್ಯಾರು ಹೊಸಮನೆ ಸಪರಿವಾರ ನಾಗಬ್ರಹ್ಮಾದಿ ಕ್ಷೇತ್ರ ಮುಖ್ಯಸ್ಥರಾದ ಸಂಜೀವ ಮೂಲ್ಯ, ಸಂಗಮ್ ಸ್ಟೋರ್ ರೆಂಕೆದಗುತ್ತು ಮಾಲಕ ಸಿರಿಲ್ ಡಿಸೋಜ, ರಾಜ ಕೇಸರಿ ಸೇವಾ ಟ್ರಸ್ಟ್‌ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ಶರತ್ ಕರಾಯ ಉಪಸ್ಥಿತರಿದ್ದರು.
ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಉಪಾಧ್ಯಕ್ಷರಾದ ಸಂದೀಪ್ ಸ್ವಾಗತಿಸಿ, ಲೋಹಿತ್ ಕಾರ್ಯಕ್ರಮ ನಿರೂಪಿಸಿದರು. ಸರಕಾರಿ ಶಾಲೆಯ 350ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಿಸಲಾಯಿತು.

Related posts

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya
error: Content is protected !!