28.4 C
ಪುತ್ತೂರು, ಬೆಳ್ತಂಗಡಿ
October 12, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

ಬೆಳ್ತಂಗಡಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ ಸುಮಾರು 7:30 ಗಂಟೆಗೆ ಪಟ್ರಮೆ ನಿವಾಸಿ ಬಾಲಕೃಷ್ಣ ಎಂಬವರು ಪರಿಚಯದ ದಿನೇಶ್ ಅವರ ಆಟೋ ರಿಕ್ಷಾದಲ್ಲಿ ಕೊಕ್ಕಡ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ದಿನೇಶ್ ಅವರು ರಾಘವ ಎಂಬವರ ಅಂಗಡಿಯ ಬಳಿ ಆಟೋ ನಿಲ್ಲಿಸಿ ಅಂಗಡಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ರಾಘವ ಮತ್ತು ದಿನೇಶ್ ಅವರ ನಡುವೆ ಮಾತುಕತೆ ನಡೆಯುತ್ತಿರುವಾಗ ಆಟೋದಲ್ಲಿದ್ದ ಬಾಲಕೃಷ್ಣ ಅವರು ಆ ಕಡೆಗೆ ನೋಡಿದ ವಿಚಾರಕ್ಕೆ, ವೈಯಕ್ತಿಕ ಕಾರಣದಿಂದ ಅಂಗಡಿಯ ಮಾಲೀಕ ರಾಘವರ ಮಗ ಜಗದೀಶ ಎಂಬಾತನು ಬಾಲಕೃಷ್ಣ ರವರ ಬಳಿಗೆ ಬಂದು, “ನೀನು ಯಾಕೆ ಇಲ್ಲಿಗೆ ಬಂದಿದ್ದು?” ಎಂದು ಪ್ರಶ್ನಿಸಿ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.11 ರಂದು ಹಲ್ಲೆಗೊಳಗಾದ ಬಾಲಕೃಷ್ಣ ರವರು ನೀಡಿದ ದೂರಿನ ಮೇರೆಗೆ ಕಲಂ 115(2), BNS-2023 -3(2)(va) SC&ST -2015 ರ ಅಡಿಯಲ್ಲಿ ಆರೋಪಿ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya
error: Content is protected !!