26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಸ್ವಾಯತ್ತ ಕಾಲೇಜಿನ ತೃತೀಯ ಬಿ.ಬಿ.ಎ. ವಿದ್ಯಾರ್ಥಿ ಹಾಗೂ ಎಸ್.ಡಿ.ಎಂ ಕ್ರೀಡಾ ಸಂಘದ ಹ್ಯಾಂಡ್‌ಬಾಲ್ ಆಟಗಾರ ಅಭಿಷೇಕ್ ಎಚ್. 2026 ರ ಜುಲೈ 15ರಿಂದ 26ರವರೆಗೆ ಚೀನಾದ ಚುಝೌ (Chuzhou) ನಗರದಲ್ಲಿ ನಡೆಯಲಿರುವ 19ನೇ ಏಷ್ಯನ್ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಹಾಸನ ಮೂಲದ ಚನ್ನರಾಯಪಟ್ಟಣ ತಾಲೂಕಿನ ಹನುಮಂತ ಮತ್ತು ಲಕ್ಷ್ಮೀ ಬಿಜಿ ದಂಪತಿಗಳ ಮಗನಾದ ಅಭಿಷೇಕ್, ಕಳೆದ ಏಪ್ರಿಲ್ 12 ಮತ್ತು 13 ರಂದು ಜಾರ್ಖಂಡ್ ನಲ್ಲಿ ನಡೆದ ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಉಜಿರೆಯ ಎಸ್.ಡಿ.ಎಂ ಕಾಲೇಜಿನ ತೃತೀಯ ವರ್ಷದ ಬಿಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ದೇಶದ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಇವರ ಈ ಸಾಧನೆಗೆ ಭಾರತೀಯ ಹ್ಯಾಂಡ್‌ಬಾಲ್ ಸಂಸ್ಥೆ, ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಸಂಸ್ಥೆ ಹಾಗೂ ಎಸ್‌.ಡಿ.ಎಂ ಕ್ರೀಡಾ ಸಂಘ ವಿಶೇಷ ಸಹಕಾರ ಮತ್ತು ಪ್ರೊತ್ಸಾಹ ನೀಡಿದ್ದು, ಎಸ್‌.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುದೀನ ಪೂಜಾರಿ ನಿರಂತರ ತರಬೇತಿ ಹಾಗು ಮಾರ್ಗದರ್ಶನ ನೀಡಿದ್ದಾರೆ. ಅಭಿಷೇಕ್ ಅವರ ಈ ಸಾಧನೆಗೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಾಧನೆಗೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ., ಎಸ್‌ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್., ಉಪನ್ಯಾಸಕರು, ಪೋಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಹಾಗೂ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಎಲ್ಲರೂ ಶುಭ ಹಾರೈಸಿದ್ದಾರೆ.

ಹ್ಯಾಂಡ್‌ಬಾಲ್ ನಲ್ಲಿ ಅಭಿಷೇಕ್ ಹಲವು ಸಾಧನೆ :

19ನೇ ಏಷ್ಯನ್ ಕಿರಿಯ ಪುರುಷರ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್, ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಜೂನಿಯರ್ ರಾಷ್ಟ್ರೀಯ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ 54ನೇ ಹಿರಿಯರ ರಾಷ್ಟ್ರೀಯ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲೂ ಭಾಗವಹಿಸಿದ್ದಾರೆ. ಈ ಹಿಂದೆ
2025–26ನೇ ಸಾಲಿನಲ್ಲಿ ತಮಿಳುನಾಡಿನ ವೆಲ್ಲೂರಿನ VIT ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ.
2024–25ನೇ ಸಾಲಿನಲ್ಲಿ ತಮಿಳುನಾಡಿನ ಸೇಲಂನ ಪೆರಿಯಾರ್ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ.

Related posts

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಪಾಲೇದು : ನಂಜ ಸಂಕಪ್ಪ ರೈ ನಿಧನ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya
error: Content is protected !!