32.5 C
ಪುತ್ತೂರು, ಬೆಳ್ತಂಗಡಿ
October 15, 2026
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ 01-07-2026 ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್ ನ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ವಯರ್ ಗೆ ಅಪರಿಚಿತ ಗಂಡಸು ಕುತ್ತಿಗೆಗೆ ವಯರ್ ಸಿಕ್ಕಿಕೊಂಡು ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 35/2026 ರಂತೆ ಪ್ರಕರಣ ದಾಖಲಾಗಿರುತ್ತದೆ.

ಬಳಿಕ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿ ಹೆಸರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಜನತಾ ಕಲೋನಿ ನಿವಾಸಿ ಶರೀಫ್.ಕೆ ಮಗ ಮುಸ್ತಾಕ್(27) ಎಂಬುದಾಗಿ ತಿಳಿದುಬಂದಿದ್ದು, ಪ್ರಕರಣದಲ್ಲಿ ಮೃತಪಟ್ಟ ಮುಸ್ತಾಕ್ ನ ಮೃತದೇಹ ಪತ್ತೆಯಾದ ಸ್ಥಳದ ಹತ್ತಿರ ರಿಸಿವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಉಪಯೋಗಿಸಿ ಉಳಿದ ಹಳೆಯ ಅಲ್ಯೂಮಿನಿಯಂ ವಯರ್ ತುಂಡುಗಳು ಬಿದ್ದಿರುವುದನ್ನು ಕಂಡು ಈ ಬಗ್ಗೆ ಅನುಮಾನಗೊಂಡ ಮ್ಯಾನೇಜರ್ ರಾಜೇಂದ್ರನ್ ಅವರು ತಮ್ಮ ರಿಸೀವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಇರಿಸಿದ ಅಲ್ಯೂಮಿನಿಯಂ ವಯರ್ ನ ಬಂಡಲ್ ಗಳು, ಮತ್ತು ಇನ್ನಿತರ ಸಲಕರಣೆಗಳನ್ನು ಪರಿಶೀಲನೆ ನಡೆಸಿದಾಗ ಹಳೆಯ ಅಲ್ಯೂಮಿನಿಯಂ ವಯರ್ ಗಳು ಕಳ್ಳತನವಾಗಿರುವುದು ತಿಳಿದು ಈ ವಿಚಾರ ಮೇಲಾಧಿಕಾರಿಗಳಿಗೆ ತಿಳಿಸಿದ ಬಳಿಕ ಮೇಲಾಧಿಕಾರಿಗಳು ಬಂದು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅಂದಾಜು ಮೌಲ್ಯ 50 ಸಾವಿರ ರೂಪಾಯಿ ಮೌಲ್ಯ ಸುಮಾರು 1100 ಕೆಜಿಯಷ್ಟು ಹಳೆಯ ಅಲ್ಯೂಮಿನಿಯಂ ವಯರ್ ಗಳು ಕಳ್ಳತನವಾಗಿರುವುದಾಗಿ ಎಸ್. ಎಲ್. ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಮ್ಯಾನೇಜರ್ ಆಗಿರುವ ರಾಜೇಂದ್ರನ್(50) ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಮಾಡಿದ ಮೃತಪಟ್ಟ ಮುಸ್ತಾಕ್ ಮತ್ತು ಇತರರ ವಿರುದ್ಧ ಕಲಂ: 331(4), 305 ಜೊತೆಗೆ 3(5)ಬಿ. ಎನ್ ಎಸ್ ಯಂತೆ ಜು.11 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya
error: Content is protected !!