32.5 C
ಪುತ್ತೂರು, ಬೆಳ್ತಂಗಡಿ
October 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ‌ ಬಾವುಟ ಗುಡ್ಡ ಎಂಬಲ್ಲಿ ಗಾಂಜಾ‌ಸೇವನೆ ಮಾಡುತ್ತಿದ್ದ ಇಬ್ಬರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಪಾದಿತರಾದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಬಾವುಟಗುಡ್ಡೆ ನಿವಾಸಿ ಮಹಮ್ಮದ್ ಕಾನಿಶ್ (21) ಮತ್ತು ಕುವೆಟ್ಟು ಗ್ರಾಮದ ಮದಡ್ಕ ಬಾವುಟಗುಡ್ಡೆ ನಿವಾಸಿ ಮಹಮ್ಮದ್ ಕೈಸ್ (23) ಎಂಬವರೇ ಗಾಂಜಾಸೇವನೆ ಮಾಡಿದ ಆರೋಪಿಗಳಾಗಿದ್ದಾರೆ.

ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ ಎಂ ಜು.11 ರಂದು ಇಲಾಖಾ ಜೀಪಿನಲ್ಲಿ ಠಾಣಾ ಸರಹದ್ದಿನ ಗುರುವಾಯನಕೆರೆ, ಮದ್ದಡ್ಕ ಸಬರಬೈಲು ಕಡೆಗಳಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಇರುವ ಸಮಯ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಬಾವುಟಗುಡ್ಡೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆಪಾದಿತರಾದ ಮಹಮ್ಮದ್ ಕಾನಿಶ್ (21) ಮತ್ತು ಮಹಮ್ಮದ್ ಕೈಸ್ (23) ಎಂಬವರು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಕಂಡು ಅವರ ಬಳಿ ಹೋಗಿ ಅವರನ್ನು ವಿಚಾರಿಸಿದಾಗ ನಶೆಯ ಅಮಲಿನಲ್ಲಿ ಉತ್ತರಿಸುತ್ತಾ ಸಮರ್ಪಕವಾಗಿ ಉತ್ತರ ನೀಡದೇ ಇದ್ದವರನ್ನು ಮತ್ತೆ ಮತ್ತೆ ವಿಚಾರಿಸಲಾಗಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಕೊಕೇನ್, ಆಂಪಿಟಮಿನ್ ನ್ನು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು ಇವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 27(ಎ)ಮತ್ತು 27(ಬಿ) ಎನ್ಡಿಪಿಎಸ್ ಆಕ್ಟ್ ಯಂತೆ ಪ್ರಕರಣ ದಾಖಲಾಗಿದೆ.

Related posts

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya
error: Content is protected !!