27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ ಜು. 11 ರಂದು ಸಂಸ್ಥೆಯ ಸಭಾಂಗಣದಲ್ಲಿ ಜೂನ್ 2026 ರ ಈ-ಮ್ಯಾಗಝಿನ್ ಅನಾವರಣ ಮಾಡುವ ಮೂಲಕ ಉದ್ಘಾಟಿಸಲಾಯಿತು.

ಬೆಳ್ತಂಗಡಿಯ ವಾಣಿ ವಿದ್ಯಾ ಸಂಸ್ಥೆಯ ಪ್ರಾಚಾರ್ಯರಾದ ವಿಷ್ಣುಪ್ರಕಾಶ್ ಎಂ. ಸಮಾರಂಭ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಕೌಶಲ್ಯಆಧಾರಿತ ಶಿಕ್ಷಣ ಪಡೆಯುವಂತೆ ಹಿತವಚನ ನೀಡಿದರು.

ಈ ಸಂದರ್ಭದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 52 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉಪಾಪ್ರಾಂಶುಪಾಲರಾದ ಗಣೇಶ್ ಯು, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಷಣ್ಮುಖ ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ತರಗತಿವಾರು ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಸುಪ್ರೀತ ಮತ್ತು ಡಾ. ವಾಸಂತಿ ನಿರೂಪಿಸಿದರು. ವಿನುತಾ ಬಹುಮಾನ ಪಟ್ಟಿ ವಾಚಿಸಿದರು. ಕೀರ್ತಿ ಸ್ವಾಗತಿಸಿದರು. ಹೇಮಾವತಿ ಅತಿಥಿಗಳನ್ನು ಪರಿಚಯಿಸಿದರು. ಸುಪ್ರೀತ ವಂದಿಸಿದರು.

Related posts

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!