27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯದೊಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಜು. 12ರಂದು ಬೆಳ್ತಂಗಡಿಯ ಶ್ರೀ ಗುರು ಸಾನಿಧ್ಯ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಉದ್ಘಾಟಿಸಿದರು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅಧ್ಯಕ್ಷತೆ ವಹಿಸಿದ್ದರು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ನೂತನ ಅಧ್ಯಕ್ಷೆ ಲೀಲಾವತಿ ಪಣಕಜೆ ಮತ್ತು ಇತರ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ನೆರವೇರಿಸಿದರು.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಕ್ರಾಂತಿವೀರ ಸಂಘದ ಜಿಲ್ಲಾಧ್ಯಕ್ಷ ಸಂಪತ್ ಬಿ. ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣೆ ನಡೆಯಿತು.ಕಾರ್ಯಕ್ರಮದ ಮೊದಲು ಹೃತಿಕ ಕರ್ಕೇರ ತಂಡದಿಂದ ನೃತ್ಯ ಗಾನ ಸಿಂಚನ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಬೆಳ್ತಂಗಡಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡುಕೋಡಿ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಅಶ್ವಥ್ ಕುಮಾರ್ ಪ್ರಸ್ತಾವನೆ ಗೈದರು. ಕಾರ್ಯದರ್ಶಿ ಮಧುರ ರಾಘವ ವರದಿ ವಾಚಿಸಿದರು. ಮಾಜಿ ಅಧ್ಯಕ್ಷ ಸದಾಶಿವ ಊರ ಚುನಾವಣಾ ಅಧಿಕಾರಿಯಾಗಿ ನೂತನ ಪದಾಧಿಕಾರಿಗಳ ವಿವರ ನೀಡಿದರು.

ಆಕಾಶ್ ಗೇರುಕಟ್ಟೆ ಮತ್ತು ಸುಧಾ ರಮಾನಂದ ಕಾರ್ಯಕ್ರಮ ನಿರೂಪಿಸಿದರು.ಕೇಂದ್ರ ಸಮಿತಿಯ ಪದಾಧಿಕಾರಿಗಳು, ಘಟಕದ ಮಾಜಿ ಅಧ್ಯಕ್ಷರು, ಮಾಜಿ ನಿರ್ದೇಶಕರು, ಸಲಹೆಗಾರಾರು, ಪದಾಧಿಕಾರಿಗಳು, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರು,, ಸಂಚಲನಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

Related posts

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಬಂಗಾಡಿಯ ವಸಂತ ಗೌಡರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!