26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

ಲಾಯಿಲ : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ಆಶ್ರಯದಲ್ಲಿ ನಡೆಯುವ 22 ವರುಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜು.12 ರಂದು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಕೋಶಾಧಿಕಾರಿ ಸುಜಿತ್ ಗುರಿಂಗಾನ ಇವರು ಕಳೆದ ಸಾಲಿನ ಲೆಕ್ಕಚಾರ ಮಂಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ ಭೋಜರಾಜ್ ಪ್ರಗತಿನಗರ ವಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಪ್ರಕಾಶ್ ಕಾಶಿಬೆಟ್ಟು ಉಪಸ್ಥಿತರಿದ್ದರು.


22 ನೇ ವರುಷದ ಮೊಸರು ಕುಡಿಕೆ ಉತ್ಸವದ ನೂತನ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ ಲಾಯಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುರೇಶ್ ರಾಘವೇಂದ್ರ ನಗರ, ಕಾರ್ಯದರ್ಶಿಯಾಗಿ ಅಜಯ್ ಶಿವಾಜಿನಗರ, ಕೋಶಾಧಿಕಾರಿಯಾಗಿ ಅನಿಲ್ ಕಕ್ಕೇನ, ಜೊತೆ ಕೋಶಾಧಿಕಾರಿಯಾಗಿ ರಾಕೇಶ್ ಆದರ್ಶನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಲಾಯಿಲ, ಕ್ರೀಡಾ ಕಾರ್ಯದರ್ಶಿಯಾಗಿ ರವಿ ನಾಡೆಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಆಯುಷ್ ಲಾಯಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಅನ್ನಸಂತರ್ಪಣೆ ಸಮಿತಿ ಸಂಚಾಲಕರಾಗಿ ಹರಿಕೃಷ್ಣ ಪುತ್ರಬೈಲು, ವಿಜಿತ್ ಗುರಿಂಗಾನ, ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸಮಿತಿಯ ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಗಣೇಶ್ ಧನ್ಯವಾದವಿತ್ತರು.

Related posts

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!