27.6 C
ಪುತ್ತೂರು, ಬೆಳ್ತಂಗಡಿ
October 16, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ದಿಡುಪೆಯ ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್‌ಹಾಗೂ ಇತರರ ವಿರುದ್ದ ಪ್ರಕರಣ‌ ದಾಖಲಿಸಲಾಗಿದೆ.
ಮಂಗಳೂರಿನಿಂದ ಯುವತಿ ತನ್ನ ಸ್ನೇಹಿತ ಫರ್ಹಾನ್ ನೊಂದಿಗೆ ಜಲಪಾತ ನೋಡಲು ಜು.12 ರಂದು ದಿಡುಪೆಗೆ ಬರುತ್ತಾಳೆ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಲ್ಲಿ ಅನುಮತಿ ಪಡೆದು ಜಲಪಾತಕ್ಕೆ ತೆರಳಿ ಹಿಂತಿರುಗಿ ಬಂದ ವೇಳೆ‌ ಯುವತಿಯನ್ನು ತಡೆದ ಸ್ಥಳೀಯ ಯುವಕರ ತಂಡವೊಂದು ಅವಾಚ್ಯವಾಗಿ ನಿಂದಿಸಿ ನಿನ್ನೊಂದಿಗೆ ಬಂದಿದ್ದ ಯುವಕನನ್ನು ಇಲ್ಲಿಗೆ ಕರೆಸು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ಯುವತಿಯ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆ 126(2), 352, 351(2) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ‌ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya
error: Content is protected !!