27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಬೆಳ್ತಂಗಡಿ: ದ.ಕ. ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ, ಇಲ್ಲಿನ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆಯು ಜು 11 ನಡೆಯಿತು.

ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ,ಪುಸ್ತಕ ಸೇರಿದಂತೆ ಇನ್ನೂ ಅನೇಕ ರೀತಿಯ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಕಾರ್ಯ ಮುಳಿಯ ಜ್ಯುವೆಲ್ಲರ್ಸ್ ಮಾಡುತ್ತಿರುವುದು ಅಭಿನಂದನೀಯ , ಲಾಭದ ಒಂದು ಪಾಲು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ವಿನಿಯೋಗಿಸುವ ಮೂಲಕ ಮಾದರಿ ಕಾರ್ಯಕ್ರಮಗಳನ್ನು ಮಾಡುತ್ತಿರುವ ಮುಳಿಯ ಜ್ಯುವೆಲ್ಲರ್ಸ್ ಪಾರದರ್ಶಕ ವ್ಯವಹಾರ , ಸಿಬ್ಬಂದಿಗಳ ನಗುಮೊಗದ ಸೇವೆಯಿಂದ  ಈಗಾಗಲೇ  ತಾಲೂಕಿನ ಜನತೆಯ ಪ್ರೀತಿಯ ಆಭರಣ ಮಳಿಗೆಯಾಗಿ ಬೆಳೆದಿದೆ.  ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಪತ್ರಕರ್ತ ಮಾಜಿ ಗ್ರಾ.ಪಂ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಈ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಳಿಯ ಜ್ಯುವೆಲ್ಲರ್ಸ್ ಸಿಬ್ಬಂದಿಗಳಾದ ವಿನಯಚಂದ್ರ, ಅಭಿಷೇಕ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಮಧು ಎಚ್ ಸಿ. ಸ್ವಾಗತಿಸಿದರು. ಶಿಕ್ಷಕರುಗಳಾದ ಕರುಣಾಕರ ಎನ್. ಶಾಂತಾ ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!