32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತ , ಹಿಂದಿ ಹಾಗೂ ಕನ್ನಡ ಭಾಷೆಗಳ ಭಾಷಾ ವೇದಿಕೆಯಾದ ‘ ಸಂಹಿಕ ‘ ದ ವತಿಯಿಂದ ಹಳಗನ್ನಡ ಭಾಷೆ, ಕಾವ್ಯಗಳ ಪರಿಚಯದ ಉದ್ದೇಶದಿಂದ ತೊರವೆ ರಾಮಾಯಣದಿಂದ ಆಯ್ದ ‘ ತಾಟಕಿ ವಧೆ ಹಾಗೂ ಅಹಲ್ಯಮೋಕ್ಷ ‘ ಎಂಬ ಕಥಾ ಭಾಗವನ್ನು ಗಮಕ ವಾಚನ ಪ್ರವಚನದ ಮೂಲಕ ಪ್ರಸ್ತುತಪಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ವಿನೂತನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವಾಚನಕಾರರಾಗಿ ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅಮೃತಾ ಎನ್ , ಪ್ರವಚನದಲ್ಲಿ ಶ್ರೀರಾಮನಾಗಿ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್, ವಿಶ್ವಾಮಿತ್ರರಾಗಿ ಕನ್ನಡ ಭಾಷಾ ಉಪನ್ಯಾಸಕ ಡಾ.ಮಹಾವೀರ ಜೈನ್ ಇಚ್ಲಂಪಾಡಿ ಇವರು ಭಾಗವಹಿಸಿದರು.

ಸಭಾ ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ರಾಜೇಶ್ ಬಿ, ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ ಐತಾಳ್, ಹಿಂದಿ ವಿಭಾಗದ ಮುಖ್ಯಸ್ಥರಾದ ನಾಗರಾಜ ಭಂಡಾರಿ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುವೆಟ್ಟು ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya
error: Content is protected !!