26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 55 ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜು.16 ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ. ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30ರಿಂದ 8ಗಂಟೆ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದ್ದು, ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ವಾಚನ-ಪ್ರವಚನ ನಡೆಸಿಕೊಡುತ್ತಾರೆ.

ಶನಿವಾರ ಮತ್ತು ಭಾನುವಾರಗಳಲ್ಲಿ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.
ಜು.16 ರಂದು ಗುರುವಾರ ಮತ್ತು 17 ರಂದು ಶುಕ್ರವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.


ಉದ್ಘಾಟನಾ ಸಮಾರಂಭ: ಜುಲೈ 16 ರಂದು ಸಂಜೆ 5 ಗಂಟೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಪುರಾಣ ವಾಚನ-ಪ್ರವಚನ ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!