27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ:ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ/ಬೆಳ್ತಂಗಡಿ ವತಿಯಿಂದ 2026ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಇಂಜಿನಿಯರಿಂಗ್ (B.E/B.Tech) ಅಥವಾ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಬೆಳ್ತಂಗಡಿ ತಾಲೂಕಿನ ನಿವಾಸಿಗಳಾಗಿರಬೇಕು. ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇ.70 ಅಂಕಗಳನ್ನು ಪಡೆದಿರಬೇಕು. ಮಾನ್ಯತೆ ಪಡೆದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಕಾಲೇಜಿಗೆ ಪ್ರವೇಶ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3 ಲಕ್ಷಕ್ಕಿಂತ ಕಡಿಮೆಯಿರಬೇಕು. ಅರ್ಜಿ ಸಲ್ಲಿಸಲು ಜುಲೈ 30, 2026 ಕೊನೆಯ ದಿನವಾಗಿದೆ. ವಿದ್ಯಾರ್ಥಿವೇತನದ ಮೊತ್ತವನ್ನು ಟ್ರಸ್ಟ್‌ನ ವಿವೇಚನೆಯಂತೆ ನಿಗದಿಪಡಿಸಲಾಗುವುದು. ಅರ್ಜಿ ಸಲ್ಲಿಸಲು https://forms.gle/eCUPzovjfAV5MChx8


ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ನೀಡಲಾಗುವುದರಿಂದ ಅರ್ಹ ವಿದ್ಯಾರ್ಥಿಗಳು ಶೀಘ್ರವಾಗಿ ಅರ್ಜಿ ಸಲ್ಲಿಸುವಂತೆ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಈ ನಂಬರಿಗೆ 9480505007 ಸಂಪರ್ಕಿಸುವಂತೆ ತಿಳಿಸಲಾಗಿದೆ. [email protected] ಇ-ಮೇಲ್ ಮೂಲಕ ಸಂಪರ್ಕಿಸಬಹುದಾಗಿದ್ದು, ಗೂಗಲ್ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು‌ ಸಂಘಟಕರು ತಿಳಿಸಿದ್ದಾರೆ.

Related posts

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya
error: Content is protected !!