July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

ಉಜಿರೆ : ವಿದ್ಯಾರ್ಥಿ ಜೀವನದ ಯಶಸ್ಸಿಗೆ ದೂರದೃಷ್ಟಿತ್ವ ಮತ್ತು ಸಕಾರಾತ್ಮಕ ಮನೋಭಾವ ಅತ್ಯಂತ ಮುಖ್ಯ. ಪಠ್ಯವನ್ನು ಕೇವಲ ಪರೀಕ್ಷೆಗಳಿಗಲ್ಲದೆ, ಅದರ ಅರ್ಥವನ್ನು ಗ್ರಹಿಸಿ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಕಾಲೇಜಿನಲ್ಲಿ ಲಭ್ಯವಿರುವ ಗ್ರಂಥಾಲಯ, ಪ್ರಯೋಗಾಲಯ, ವಿದ್ಯಾರ್ಥಿ ಸಂಘಗಳು ಹಾಗೂ ವಿವಿಧ ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳ ಸದುಪಯೋಗವನ್ನು ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ಮಣಿಪಾಲದ ಎಂಐಟಿ ಮಾಹೆ ಸ್ಕೂಲ್ ಆಫ್ ಬೇಸಿಕ್ ಸೈನ್ಸಸ್, ಹ್ಯೂಮ್ಯಾನಿಟೀಸ್ ಸಹ ಪ್ರಾಧ್ಯಾಪಕ ಡಾ. ಸುಧಾಕರ್ ವೈ. ಎನ್. ಹೇಳಿದರು.

ಇವರು ರಸಾಯನಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನೆಗೊಳಿಸಿ ಮಾತನಾಡಿದರು.

ನಿರಂತರ ಪರಿಶ್ರಮ, ಅಭ್ಯಾಸ, ಶಿಸ್ತು ಮತ್ತು ಏಕತೆಯ ಮನೋಭಾವ ನಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ. ಸಮಾಜವು ವಿದ್ಯಾವಂತರಿಂದ ಕೇವಲ ಪದವಿ ಅಲ್ಲ, ಉತ್ತಮ ಮೌಲ್ಯಗಳು, ಸೇವಾ ಮನೋಭಾವ ಮತ್ತು ಸಕಾರಾತ್ಮಕ ಬದಲಾವಣೆಯನ್ನು ನಿರೀಕ್ಷಿಸುತ್ತದೆ. ಪ್ರತಿಯೊಂದು ಚಟುವಟಿಕೆಯಲ್ಲೂ ಸಕ್ರಿಯವಾಗಿ ಭಾಗವಹಿಸಿ, ತಂಡದೊಂದಿಗೆ ಕೆಲಸ ಮಾಡುವ ಗುಣವನ್ನು ಬೆಳೆಸಿಕೊಳ್ಳಿ. ಇಂತಹ ಅನುಭವಗಳು ನಿಮ್ಮ ವ್ಯಕ್ತಿತ್ವ ವಿಕಸನಕ್ಕೆ ಭದ್ರ ಅಡಿಪಾಯವಾಗುತ್ತವೆ ಎಂದು ರಸಾಯನಶಾಸ್ತ್ರ ವಿಭಾಗದ ನೂತನ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಶುಭ ಹಾರೈಸಿದರು. ಈ ಸಂಘವು ವಿದ್ಯಾರ್ಥಿಗಳಲ್ಲಿ ಪ್ರತಿಭೆ, ನಾಯಕತ್ವ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಉತ್ತಮ ವೇದಿಕೆಯಾಗಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪ ಪ್ರಾಚಾರ್ಯರಾದ ನಂದ ಕುಮಾರಿ ಮಾತನಾಡಿ,
ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಿಗೆ ಹೊಸ ಕಲಿಕೆಗೆ ಅನುವು ಮಾಡಿಕೊಡುವ ಜೊತೆಗೆ ವಿನೂತನ ಆವಿಷ್ಕಾರ ಮತ್ತು ವಿದ್ಯಾರ್ಥಿ ಸಮಗ್ರ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತದೆ. ವಿದ್ಯಾರ್ಥಿ ಸಂಘಗಳು ಕಾರ್ಯಗಳ ಆಯೋಜನೆಗೆ ಮಾತ್ರ ಸೀಮಿತವಾಗಿದೆ, ಹೊಸ ವಿಷಯಗಳ ಚರ್ಚೆ ಮತ್ತು ಜಾಗೃತಿಯನ್ನು ಮೂಡಿಸಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಹೊಸ ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ ಎಂದು ನೂತನವಾಗಿ ರಚನೆಯಾದ ವಿದ್ಯಾರ್ಥಿ ಸಂಘಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸ್ಫಟಿಕ ಸಂಘ ಅಧ್ಯಕ್ಷ ಪ್ರಶಾಂತ್ ಎಸ್. ಪೂಜಾರಿ, ಕಾರ್ಯದರ್ಶಿ ಜ್ಯೋತ್ಸ್ನಾ ಎಸ್. ನಡೋಳಿ ಸೇರಿದಂತೆ ಇತರೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಕಾಲೇಜು ಹಾಗೂ ರಾಸಾಯನ ಶಾಸ್ತ್ರ ವಿಭಾಗದ ವತಿಯಿಂದ ಅತಿಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದ ಬಳಿಕ “Chemistry for Your Future: Career and Higher Education” ವಿಷಯದ ಕುರಿತು ಡಾ. ಸುಧಾಕರ್ ವೈ. ಎನ್. ಅವರು ವಿಶೇಷ ಉಪನ್ಯಾಸ ನೀಡಿದರು. ರಸಾಯನಶಾಸ್ತ್ರ ಕ್ಷೇತ್ರದಲ್ಲಿನ ವಿವಿಧ ಉದ್ಯೋಗಾವಕಾಶಗಳು, ಉನ್ನತ ಶಿಕ್ಷಣದ ಮಾರ್ಗಗಳು, ಸಂಶೋಧನಾ ಕ್ಷೇತ್ರದ ಅವಕಾಶಗಳು ಹಾಗೂ ಹೊಸ ಅಂತರ್‌ಶಿಸ್ತೀಯ ಕ್ಷೇತ್ರಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳು, ಸಂಶೋಧನೆ ಹಾಗೂ ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರು ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಶ್ರದ್ಧಾ ಸ್ವಾಗತಿಸಿದರು. ಕುಮಾರಿ ವರಲಕ್ಷ್ಮಿ ಹಾಗೂ ಶ್ರದ್ಧಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಶ್ರದ್ಧಾ ವಂದಿಸಿದರು. ಕಾರ್ಯಕ್ರಮವನ್ನು ಸ್ಪಟಿಕಾ ಸಂಘದ ಸಂಯೋಜಕಿ, ಉಪನ್ಯಾಸಕಿ ಡಾ. ಗಾನವಿ ಡಿ. ಸಂಯೋಜಿಸಿದರು.

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!