32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ “ವೇದಿಕೆಯಿಂದ ನಾಯಕತ್ವದತ್ತ” ಎಂಬ ವಿಷಯದ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ಜು.11ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಯು. ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ಭಾರತದ ವಲಯ ತರಬೇತುದಾರರು ಹಾಗೂ ವಾಣಿ ಪದವಿ ಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಸುಧೀರ್ ಕೆ. ಎನ್. ಭಾಗವಹಿಸಿ, “ವೇದಿಕೆಯಿಂದ ನಾಯಕತ್ವದತ್ತ” ಎಂಬ ವಿಷಯದ ಕುರಿತು ಪರಿಣಾಮಕಾರಿ ತರಬೇತಿ ನೀಡಿದರು. ಉತ್ತಮ ನಾಯಕತ್ವದ ಗುಣಗಳು, ಆತ್ಮವಿಶ್ವಾಸ, ಸಂವಹನ ಕೌಶಲ್ಯ, ವೇದಿಕೆ ನಿರ್ವಹಣೆ ಹಾಗೂ ಸಮಾಜಸೇವೆಯಲ್ಲಿ ಯುವಜನರ ಪಾತ್ರದ ಬಗ್ಗೆ ಅವರು ಸ್ವಯಂಸೇವಕರಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮವನ್ನು ಎನ್.ಎಸ್.ಎಸ್. ಘಟಕದ ನಾಯಕಿ ಇಂದುಮತಿ ನಿರೂಪಿಸಿದರು. ಎನ್.ಎಸ್.ಎಸ್. ಸ್ವಯಂಸೇವಕ ಸಂದೇಶ್ ಸ್ವಾಗತಿಸಿ, ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಯು. ಅವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಎನ್.ಎಸ್.ಎಸ್. ಸ್ವಯಂಸೇವಕ ಲತೇಶ್ ವಂದನಾರ್ಪಣೆ ಸಲ್ಲಿಸಿದರು.

ಈ ತರಬೇತಿ ಕಾರ್ಯಕ್ರಮವು ಸ್ವಯಂಸೇವಕರಲ್ಲಿ ನಾಯಕತ್ವ ಕೌಶಲ್ಯ, ಸೇವಾ ಮನೋಭಾವ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಹೊಸ ಚೈತನ್ಯ ತುಂಬಿತು.

Related posts

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!