32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

ಬೆಳ್ತಂಗಡಿ : ಇಲ್ಲಿನ ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ಕಾಲೇಜಿನ ಸಭಾಂಗಣದಲ್ಲಿ ಜು.14ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರ್ಸುಲೈನ್ ಫ್ರಾನ್ಸಿಸ್ಕನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಭಗಿನಿ ಜುಲಿಯಾನಾ ಪಾಯ್ಸ್ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಕರು ಹಾಗೂ ಪೋಷಕರ ಸಹಭಾಗಿತ್ವ ಅತ್ಯಂತ ಮಹತ್ವದ್ದಾಗಿದೆ. ಉತ್ತಮ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.


ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಅವರು ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಸಾಧನೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.


ಮುಖ್ಯ ಅತಿಥಿಗಳಾಗಿ ಸಂತ ತೆರೇಸಾ ಕಾನ್ವೆಂಟಿನ ಸುಪೀರಿಯರ್ ಬಗಿನಿ ಜೆಸಿಂತಾ ಬರೆಟ್ಟೋ ಹಾಗೂ ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಬಗಿನಿ ಲೀನಾ ಡಿಸೋಜಾ ಉಪಸ್ಥಿತರಿದ್ದು, 2025-26 ನೇ ಶೈಕ್ಷಣಿಕ ವರ್ಷದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಆಲ್ವಿನ್ ಪಿಂಟೋ ಉಪಸ್ಥಿತರಿದ್ದರು. ಉಪನ್ಯಾಸಕಿ ಜೀಟಾ ಅವರು ೨೦೨೫–೨೬ನೇ ಶೈಕ್ಷಣಿಕ ವರ್ಷದ ವರದಿಯನ್ನು ಸಭೆಯಲ್ಲಿ ಮಂಡಿಸಿದರು.
ಶಾಲಾ–ಕಾಲೇಜಿನ ಕಾರ್ಯಚಟುವಟಿಕೆಗಳ ಅಂಗವಾಗಿ 2026-27ನೇ ಶೈಕ್ಷಣಿಕ ವರ್ಷವನ್ನು ‘ಸ್ವಚ್ಛ ವಾತಾವರಣ, ಆರೋಗ್ಯಕರ ಜೀವನ’ ಎಂಬ ಧ್ಯೇಯ ವಾಕ್ಯದೊಂದಿಗೆ ಕಿರು ನಾಟಕದ ಮೂಲಕ ಉದ್ಘಾಟಿಸಲಾಯಿತು.


ಸಭೆಯಲ್ಲಿ ವಿದ್ಯಾರ್ಥಿಗಳ ಪೋಷಕರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

ಕಾಲೇಜಿನ ಉಪಪ್ರಾಂಶುಪಾಲರಾದ ಭಗಿನಿ ಸಹಾಯ ಮೇರಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕ ಲೋಕೇಶ್ ಹಾಗೂ ವಿಜ್ಞಾನ ವಿಭಾಗದ ಉಪನ್ಯಾಸಕಿ ನಿರೂಪಮ ನಿರೂಪಿಸಿದರು. ಉಪನ್ಯಾಸಕಿ ಕುಮಾರಿ ರಶ್ಮಿ ವಂದನಾರ್ಪಣೆಗೈದರು.

Related posts

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya
error: Content is protected !!