26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ನಾನ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಸಕ್ರೀಯವಾಗಿ ಬಳಸಿಕೊಂಡು ಭವಿಷ್ಯದ ಅವಕಾಶಗಳನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಜವಾಬ್ದಾರಿಯುತ ಪ್ರಜೆಗಳಾದಗ ಸಶಕ್ತ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ. ಶೈಕ್ಷಣಿಕ ಸಾಧನೆಯೊಂದಿಗೆ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳೋಣ ಎಂದು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.

ಇವರು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಅರ್ಥ ಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಿದ್ದ ಇಕೋ-ವಿಷನ್ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅರ್ಥ ಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿ ವಿಭಾಗದ ಶೈಕ್ಷಣಿಕ ಚಟುವಟಿಕೆಗಳ ಮಾಹಿತಿಯನ್ನು ಹಂಚಿಕೊಂಡರು. ಇಕೋ-ವಿಷನ್ ಸಂಘದ ವಿದ್ಯಾರ್ಥಿ ಸಂಚಾಲಕರಾಗಿ ತೃತೀಯ ಬಿ.ಎ. ವಿದ್ಯಾರ್ಥಿಗಳಾದ ನೆವಿಲ್ ಮತ್ತು ಕವನ ಸೇರಿದಂತೆ ಒಟ್ಟು 15 ವಿದ್ಯಾರ್ಥಿಗಳು ಪದಗ್ರಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳು ರಚಿಸಿದ ಬಿತ್ತಿ ಪತ್ರಿಕೆಯ ಅನಾವರಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಿಭಾಗದ ಉಪನ್ಯಾಸಕರಾದ ಅಭಿನಂದನ್ ಜೈನ್ ಹಾಗೂ ನಾಗರಾಜ್ ಪೂಜಾರಿ ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಇಕೋ-ವಿಷನ್ ಸಂಘದ ಸಂಚಾಲಕ ಹಾಗೂ ಪ್ರಾಧ್ಯಾಪಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಕಾರ್ಯಕ್ರಮವನ್ನು ಸಂಯೋಜಿಸಿ ವಂದಿಸಿದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya
error: Content is protected !!