32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 (ಬುರುಡೆ ಷಡ್ಯಂತ್ರ) ಪ್ರಕರಣದಲ್ಲಿ 23-08-2025 ರಂದು ಆರೋಪಿ ಮಾಜಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ತಂಡ ಬಂಧಿಸಿ ಒಟ್ಟು ಆರು ಮಂದಿ ವಿರುದ್ಧ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೊದಲ ವರದಿಯನ್ನು ಸಲ್ಲಿಕೆ ಮಾಡಿದೆ. ಬಳಿಕ ತನಿಖೆಯನ್ನು ಮುಂದುವರಿಸಿ ಈಗ ಅಂತಿಮ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ 20-11-2025 ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಮುಂದೆ ಜು.15 ರಂದು 3 ಗಂಟೆಗೆ ಎಸ್ಐಟಿ ಮೊದಲಿನ 3,923 ಮತ್ತು ಈಗಿನ 3,082 ಸೇರಿ ಈವರೆಗೆ ತನಿಖೆಯ ಸಂಪೂರ್ಣ ಒಟ್ಟು 7005 ಪುಟಗಳ ಅಂತಿಮ ವರದಿಯನ್ನು 12 ಫೈಲ್ ಗಳನ್ನು ಮಾಡಿ ಸಲ್ಲಿಕೆ ಮಾಡಿದ್ದಾರೆ. ಹಾಗೂ ಬುರುಡೆ, ಅಸ್ಥಿಪಂಜರ , ಮೊಬೈಲ್ , ದಾಖಲೆಗಳು ಎಫ್.ಎಸ್‌.ಎಲ್ ಗೆ ಹೋಗಿ ಬಂದ ಎಲ್ಲಾ ವಸ್ತು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಇನ್ಸ್‌ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು. ಪ್ರಕರಣದ ಆರೋಪಿ ಚಿನ್ನಯ್ಯ ಕೂಡ ನ್ಯಾಯಾಲಯದಲ್ಲಿ ಹಾಜರಾಗಿದ್ದಾರೆ.

Related posts

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

Suddi Udaya

ಜ.11: “ಆಸರೆ” ಸ್ಕಾಲರ್ ಶಿಪ್ ಪರೀಕ್ಷೆ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅವಕಾಶ : ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya
error: Content is protected !!