26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

ಕೊಕ್ಕಡ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಜು.14 ರಂದು ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಹಾವು ಕಚ್ಚಿದ ಬಾಲಕಿಯನ್ನು ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಪಾತಿಮತ್ ಸಹದಿಯಾ(4) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ ಪಾತಿಮತ್ ಸಹದಿಯಾ ಎಂದಿನಂತೆ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ತರಗತಿ ಕೊಠಡಿಯೊಳಗೆ ಮಕ್ಕಳ ಆಟಿಕೆಗಳ ನಡುವೆ ಅಡಗಿದ್ದ ಹಾವು ಬಾಲಕಿಗೆ ಕಚ್ಚಿದೆ ಎನ್ನಲಾಗಿದೆ. ಹಾವು ಕಚ್ಚಿದ ತಕ್ಷಣ ಬಾಲಕಿ ಜೋರಾಗಿ ಅಳಲು ಆರಂಭಿಸಿದ್ದು, ಇದನ್ನು ಗಮನಿಸಿದ ಅಂಗನವಾಡಿ ಸಹಾಯಕಿ ಕೂಡಲೇ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಬಿ.ಎಲ್.ಓ. ಕರ್ತವ್ಯದ ನಿಮಿತ್ತ ಹೊರಗಡೆ ತೆರಳಿದ್ದರಿಂದ ಕೇಂದ್ರದಲ್ಲಿ ಸಹಾಯಕಿ ಮಾತ್ರ ಕರ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ.

ಬಾಲಕಿಯನ್ನು ತಕ್ಷಣ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿಂದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ರವಾನಿಸಿದ್ದು, ಅಲ್ಲಿ ತುರ್ತು ನಿಗಾ ಘಟಕದಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya
error: Content is protected !!