32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

ಬೆಳ್ತಂಗಡಿ: “ನಮ್ಮ ಆಹಾರ – ನಮ್ಮ ಹಕ್ಕು, ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು” ಎಂಬ ಘೋಷಣೆಯೊಂದಿಗೆ ಪಡಿತರ ವ್ಯವಸ್ಥೆಯ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಜು.15ರಂದು ಬೆಳ್ತಂಗಡಿಯ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕರಾವಳಿ ಭಾಗದ ಸಾವಿರಾರು ಕುಟುಂಬಗಳ ಆಹಾರ ಪದ್ಧತಿಯಲ್ಲಿ ಕುಚ್ಚಲು ಅಕ್ಕಿಗೆ ವಿಶೇಷ ಸ್ಥಾನವಿದೆ. ಸ್ಥಳೀಯರ ಆಹಾರ ಸಂಸ್ಕೃತಿ ಹಾಗೂ ಜೀವನಶೈಲಿಗೆ ಹೊಂದುವ ಆಹಾರ ಧಾನ್ಯವನ್ನು ಪಡಿತರ ವ್ಯವಸ್ಥೆಯ ಮೂಲಕ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಕರಾವಳಿ ಭಾಗದ ಜನರ ಆಹಾರ ಅಕ್ಕಿಗೆ ಗೌರವ ನೀಡಿ, ಕುಚ್ಚಲು ಅಕ್ಕಿಯನ್ನು ಪಡಿತರ ವ್ಯವಸ್ಥೆಯ ಮೂಲಕ ವಿತರಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಅಂಗವಾಗಿ ನ್ಯಾಯಬೆಲೆ ಅಂಗಡಿಗೆ ಆಗಮಿಸಿದ ಸಾರ್ವಜನಿಕರಿಗೆ ಸಾಂಕೇತಿಕವಾಗಿ ಕುಚ್ಚಲು ಅಕ್ಕಿಯನ್ನು ವಿತರಿಸುವ ಮೂಲಕ ಸರ್ಕಾರ ಕರಾವಳಿ ಭಾಗದ ಜನರ ಆಹಾರ ಪದ್ಧತಿಗೆ ಅನುಗುಣವಾಗಿ ಪಡಿತರ ವ್ಯವಸ್ಥೆಯಲ್ಲಿಯೂ ಕುಚ್ಚಲು ಅಕ್ಕಿಯನ್ನು ಒದಗಿಸಬೇಕೆಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಲಾಯಿಲ ಬ್ಲಾಕ್ ಅಧ್ಯಕ್ಷ ಸಲೀಂ ಲಾಯಿಲ, ಬೆಳ್ತಂಗಡಿ ನಗರ ಸಮಿತಿ ಅಧ್ಯಕ್ಷ ರಿಯಾಝ್ ಬೆಳ್ತಂಗಡಿ, ಕಾರ್ಯದರ್ಶಿ ಬಶೀರ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya
error: Content is protected !!