26.9 C
ಪುತ್ತೂರು, ಬೆಳ್ತಂಗಡಿ
October 16, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಆಧುನಿಕ ಮಾಧ್ಯಮ ಕ್ಷೇತ್ರದಲ್ಲಿ ಎ.ಐ. ತಂತ್ರಜ್ಞಾನ ಎಂಬ ವಿಷಯದಲ್ಲಿ ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಜಯ್ ಶಾಸ್ತ್ರಿ ಸಿ.ಜಿ. ಉಪನ್ಯಾಸ ನೀಡಲಿದ್ದಾರೆ.

ಪತ್ರಿಕಾ ವಿತರಕ ಇಬ್ರಾಹಿಂ ನೆಕ್ಕಿಲಾಡಿ ಅವರನ್ನು ಪತ್ರಿಕಾ ದಿನಾಚರಣೆ ಪ್ರಯುಕ್ತ ಸನ್ಮಾನಿಸಿ ಗೌರವಿಸಲಾಗುತ್ತದೆ. ತಾಲೂಕು ಪತ್ರಕರ್ತರ ಸಂಘದಲ್ಲಿರುವ ವಿಶೇಷ ಸಾಧಕ ಪತ್ರಕರ್ತರು ಹಾಗೂ ಶೈಕ್ಷಣಿಕ ಸಾಧನೆ ಮಾಡಿದ, ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುತ್ತದೆ.ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಕಾರ್ಯದರ್ಶಿ ಸಿದ್ಧಿಕ್ ನೀರಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬಿ.ಟಿ.ರಂಜನ್ ಪ್ರಶಸ್ತಿ:ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಬಿ.ಟಿ. ರಂಜನ್ ಅವರು ಪತ್ರಿಕಾ ರಂಗಕ್ಕೆ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಅವರ ಸ್ಮರಣಾರ್ಥ ಉತ್ತಮ ಪತ್ರಿಕಾ ವರದಿಗೆ ಪುತ್ತೂರು ಉಪ ವಿಭಾಗದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ವಾರ್ಷಿಕ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಪ್ರಥಮ ವರ್ಷದ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.ಬೆಳ್ತಂಗಡಿಯಲ್ಲಿ ಸುದ್ದಿ ಬಿಡುಗಡೆ ಮತ್ತು ಉದಯವಾಣಿ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ ಅರವಿಂದ ಹೆಬ್ಬಾರ್ ಅವರು ಕಳೆದ 7 ವರ್ಷಗಳಿಂದ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya
error: Content is protected !!