26.2 C
ಪುತ್ತೂರು, ಬೆಳ್ತಂಗಡಿ
October 17, 2026
Uncategorized

ಅಳದಂಗಡಿಯ ಶ್ರೀರಂಗ ಮಯ್ಯರಿಗೆ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಪುತ್ತೂರು ಮತ್ತು ಕಡಬ ತಾಲೂಕು ಘಟಕದ ವತಿಯಿಂದ ಪುತ್ತೂರಿನ ಬಂಟರ ಭವನದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತನ್ನ ದಕ್ಷ ಹಾಗೂ ಪ್ರಾಮಾಣಿಕ ಸೇವೆಗಾಗಿ ಜಿಲ್ಲಾ ಮಟ್ಟದ ಸೇವಾಭೂಷಣ ಪ್ರಶಸ್ತಿ ಪಡೆಯಬೇಕಿದ್ದ ಧರೆಗುಡ್ಡೆಯ ಸರಕಾರಿ ಪ್ರೌಢಶಾಲೆಯ ಪ್ರಥಮ ದರ್ಜೆ ಸಹಾಯಕ ಎ. ಶೀರಂಗ ಮಯ್ಯ ಅವರಿಗೆ ಮಂಗಳೂರಿನಲ್ಲಿ ಇತ್ತೀಚೆಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನಾರಾಯಣ ಮಯ್ಯ ಮತ್ತು ಕೆ. ಸೀತಮ್ಮ ದಂಪತಿಯ ಪುತ್ರನಾಗಿ 1970ರ ಆಗಸ್ಟ್ 4ರಂದು ಅಳದಂಗಡಿಯಲ್ಲಿ ಜನಿಸಿದ ಶ್ರೀರಂಗ ಮಯ್ಯ ಅವರು ತಮ್ಮ ವಿದ್ಯಾಭ್ಯಾಸದ ಬಳಿಕ 1990ರ ಜುಲೈ 19ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ವೃತ್ತಿಗೆ ಸೇರಿದ್ದರು. 1995ರ ಜೂನ್ 4ರಿಂದ 2008ರ ಮಾರ್ಚ್ 4ರವರೆಗೆ ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು 2008ರ ಮಾರ್ಚ್ 5ರಿಂದ 2012ರ ಅಕ್ಟೋಬರ್ 2ರವರೆಗೆ ಪದ್ಮುಂಜ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿದ್ದ ಇವರು ಬಳಿಕ ಭಡ್ತಿ ಪಡೆದು 2012ರ ಅಕ್ಟೋಬರ್ 3ರಿಂದ ಧರೆಗುಡ್ಡೆ ಸರಕಾರಿ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇವರ ದಕ್ಷ ಮತ್ತು ಪ್ರಾಮಾಣಿಕ ಸೇವೆ ಗುರುತಿಸಿ ಜಿಲ್ಲಾ ಮಟ್ಟದ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್ ಅವರಿಂದ ಶ್ರೀರಂಗ ಮಯ್ಯ ಅವರು ಪ್ರಶಸ್ತಿ ಸ್ವೀಕರಿಸಿದರು.

Related posts

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya
error: Content is protected !!