26.2 C
ಪುತ್ತೂರು, ಬೆಳ್ತಂಗಡಿ
October 17, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಜು.16 ರಂದು ಸಂಜೆ ಸಂಭವಿಸಿದೆ. ಈ ಬಗ್ಗೆ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕೊಲೆ ಮಾಡಿದ ಯುವಕನ ಮಾಹಿತಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ ಕೊಲೆ ಮಾಡಿದ ಯುವಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಚೇತನ್ ಗೌಡ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ. ಈತ ಕೊಲೆಯಾದ ಯುವತಿಯ ದೂರದ ಸಂಬಂಧಿಯಾಗಿದ್ದು ಹಾಗೂ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ಮಾಹಿತಿ ಲಭಿಸಿದೆ.

ಬಂಟ್ಬಾಳ ತಾಲೂಕಿನ ಉಳಿಗ್ರಾಮ ನಿವಾಸಿ ಬಾಲಕೃಷ್ಣ ಗೌಡ ಮಗಳು ಲಾವಣ್ಯ(25) ಸಾವನ್ನಪ್ಪಿದವಳು. ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಕ್ಕೆಪದವು ಮಾರ್ಗವಾಗಿ ಸಂಚಾರಿಸುವ ಸರ್ಕಾರಿ ಬಸ್ಸಿನೊಳಗೆ ಯುವತಿ ಕುಳಿತಿದ್ದಳು. ಈ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಯುವಕ, ಬಸ್ಸಿನೊಳಗೆ ನುಗ್ಗಿ ಯುವತಿಯನ್ನು ಬಲವಂತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಸಾರ್ವಜನಿಕರ ಸಮ್ಮುಖದಲ್ಲೇ ಕತ್ತಿಯಿಂದ ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರೂ ಫಲಿಸದೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

Related posts

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಪುನಃಶ್ಚೇತನ ಶಿಬಿರ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!