27.6 C
ಪುತ್ತೂರು, ಬೆಳ್ತಂಗಡಿ
October 16, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಎಲ್ ಕೆಜಿ ಮತ್ತು ಯುಕೆಜಿಯ ಮಕ್ಕಳಿಗಾಗಿ ಮಾನ್ಸೂನ್ ಡೇ ಯನ್ನು ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ, ನೀರಿನ ಮಹತ್ವ ಮತ್ತು ಮಳೆಗಾಲದ ಪ್ರಕೃತಿ ಸೌಂದರ್ಯದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಶಾಲಾ ಮುಖ್ಯೋಪಾಧ್ಯಾಯರು ಪುಟಾಣಿಗಳಿಗೆ ನೀರಿನ ಮಹತ್ವವನ್ನು ವಿವರಿಸಿದರು. ಮೊಬೈಲ್ ಟಿವಿ ಬಿಟ್ಟು ಪ್ರಕೃತಿಯ ಜೊತೆಗೆ ಸಮಯವನ್ನು ಕಳೆಯಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪುಟಾಣಿಗಳು ಮಳೆಗೆ ಸಂಬಂಧಪಟ್ಟ ವಿವಿಧ ವೇಷಭೂಷಣಗಳನ್ನು ಧರಿಸಿ, ಸಂಭ್ರಮದಿಂದ ಕುಣಿದು ಕುಪ್ಪಳಿಸಿದರು.
ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ರಂಗು ರಂಗಿನ ಬಣ್ಣದ ಛತ್ರಿಗಳು ಹಾಗೂ ರೇನ್‌ಕೋಟ್‌ಗಳನ್ನು ಧರಿಸಿ ಸಂಭ್ರಮಿಸಿದರು.
ಮಾನ್ಸೂನ್ ಗೆ ಸಂಬಂಧಿಸಿದ ವಿವಿಧ ರೀತಿಯ ಭಿತ್ತಿ ಫಲಕಗಳು ಮಕ್ಕಳ ಗಮನ ಸೆಳೆಯಿತು.

Related posts

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!