26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

ಬೆಳ್ತಂಗಡಿ: ರಾಜ್ಯದಲ್ಲಿ ಮತದಾರರ ಪಟ್ಟಿಯ, ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್)ಯ ಪ್ರಮುಖ ಹಂತ ಗಣತಿ ನಮೂನೆಗಳ ವಿತರಣೆ ಕಾರ್ಯ ಬಹುತೇಕ ಮುಕ್ತಾಯದ ಹಂತದಲ್ಲಿದ್ದು ಈಗ ಗಣತಿ ನಮೂನೆಗಳ ಭರ್ತಿಗೆ ಎದುರಾಗುವ ಸಮಸ್ಯೆ, ಗೊಂದಲ ಹಾಗೂ ಮಾಹಿತಿಯ ಕೊರತೆಗೆ ನೆರವು ನೀಡಲು ರಾಜ್ಯಾದ್ಯಂತ ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ತಿಳಿಸಿದ್ದಾರೆ.

ಜು.15ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಣತಿ ನಮೂನೆ ಭರ್ತಿ ಮಾಡುವ ಹಂತದಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಅಥವಾ ಗೊಂದಲಗಳು ಉಂಟಾಗದಂತೆ ವ್ಯವಸ್ಥೆ ಮಾಡುವುದು ಚುನಾವಣಾ ಆಯೋಗದ ಆದ್ಯತೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಟ್ಟುಕೊಂಡು ಶನಿವಾರ ಮತ್ತು ರವಿವಾರ ವಿಶೇಷ ಅಭಿಯಾನ ನಡೆಸಲಾಗುವುದು ಎಂದರು.

2002ರ ಮತದಾರರ ಪಟ್ಟಿಯಲ್ಲಿ ಮಾಹಿತಿ ಲಭ್ಯವಾಗದಿದ್ದರೂ, ಅಂತವರೂ ಗಣತಿ ನಮೂನೆಗಳನ್ನು ಭರ್ತಿ ಮಾಡಿ, ಫೋಟೋ ಅಂಟಿಸಿ ಬಿಎಲ್‌ಒಗಳಿಗೆ ಕೊಡಬೇಕು. ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಪ್ರಕಟವಾಗಿರುತ್ತದೆ. ಬಳಿಕ ಇ.ಆರ್. ಒ ಗಳಿಂದ ನೋಟಿಸ್ ಬರುತ್ತದೆ. ಅದಕ್ಕೆ ಚುನಾವಣ ಆಯೋಗ ಗುರುತಿಸಿರುವ 12 ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ಸಲ್ಲಿಸಿದರೆ, ನಿಯಮಾನುಸಾರ ಪರಿಶೀಲಿಸಿ ಇ.ಆ‌ರ್.ಒ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

Related posts

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya
error: Content is protected !!