25.7 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬೆಳ್ತಂಗಡಿ: “ಡ್ರಗ್ಸ್ ಫ್ರಿ ಮಂಗಳೂರು” ಅಭಿಯಾನದಡಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಮೊಹಮ್ಮದ್ ಅಲ್ತಾಫ್ (28) ಮತ್ತು ಉಜಿರೆಯ ಹಳೆಪೇಟೆಯ ಮೊಹಮ್ಮದ್ ಮುಸ್ತಫಾ (28) ಅವರನ್ನು ಬಂಧಿಸಲಾಗಿದೆ

ಪ್ರಕರಣದ ವಿವರ
ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ನಡೆಸಿದ ದಾಳಿಯಲ್ಲಿ ಸಿಸಿಬಿ ಪೊಲೀಸರು ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನಿಂದ ₹1.50 ಲಕ್ಷ ಮೌಲ್ಯದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಜಾಲದ ಬಗ್ಗೆ ಸುಳಿವು ಪಡೆದರು. ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಅವರಿಂದ ಒಟ್ಟು 5 ಕೆಜಿ 196 ಗ್ರಾಂ ಎಂಡಿಎಂಎ , ಕಾರು, ಬ್ಯಾಗ್ ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಪ್ರಮುಖ ಆರೋಪಿ ಮೊಹಮ್ಮದ್ ಅಲ್ತಾಫ್ ವಿರುದ್ಧ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆ ಮತ್ತು 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕಾರಿನ ಮೂಲಕ ದೆಹಲಿಯಿಂದ ಎಂಡಿಎಂಎ ತಂದು, ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದರು ಎಂದು ಬಹಿರಂಗವಾಗಿದೆ. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ಮುಂದುವರಿದಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya
error: Content is protected !!