24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಸಿ.ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬಿ.ಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆ ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಘಟನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಹೇಯ ಕೃತ್ಯಗಳು ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸುತ್ತವೆ. ಮಹಿಳೆಯರ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರನ್ನು ಕಾನೂನಿನ ಮುಂದೆ ತಂದು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಪ್ರಕರಣದ ಕುರಿತು ಪೊಲೀಸರು ತ್ವರಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಘಟನೆಯ ಹಿಂದಿರುವ ಎಲ್ಲ ಸತ್ಯಾಂಶಗಳನ್ನು ಬಹಿರಂಗಪಡಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಮಣಿಯದೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೃತ ಯುವತಿಯ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ ಅವರು, ಸರ್ಕಾರವು ಕುಟುಂಬಕ್ಕೆ ಅಗತ್ಯ ನೆರವು ಹಾಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಸಮಾಜದಲ್ಲಿ ಮಹಿಳೆಯರ ಸುರಕ್ಷತೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಇಂತಹ ಘಟನೆಗಳು ಮರುಕಳಿಸದಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಕ್ಷಿತ್ ಶಿವರಾಂ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya
error: Content is protected !!