27.5 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ನೀಟ್ ಎಂದರೆ ಎಕ್ಸೆಲ್; ರಾಜ್ಯದಲ್ಲೇ ಮತ್ತೊಮ್ಮೆ ಅಗ್ರಸ್ಥಾನ – ನಿರಂತರ ಸಾಧನೆಗೆ ಸುಮಂತ್ ಕುಮಾರ್ ಜೈನ್ ಹರ್ಷ

ಬೆಳ್ತಂಗಡಿ: ನೀಟ್ ಎಂದರೆ ಎಕ್ಸೆಲ್, ನಿರಂತರ ಸಾಧನೆಯೇ ಎಕ್ಸೆಲ್ ಕಾಲೇಜಿನ ಹೆಗ್ಗಳಿಕೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಹೆಮ್ಮೆಯಿಂದ ಹೇಳಿದ್ದಾರೆ.

2026ರ ನೀಟ್ ಫಲಿತಾಂಶದಲ್ಲಿ ಎಕ್ಸೆಲ್ ಪದವಿಪೂರ್ವ ಕಾಲೇಜು, ಗುರುವಾಯನಕೆರೆ ಮತ್ತೊಮ್ಮೆ ರಾಜ್ಯದಲ್ಲೇ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿಗಳ ಸಾಧನೆಗೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ನೀಟ್ ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದ ಕ್ಷಣ ಇದೀಗ ಸಾರ್ಥಕವಾಗಿದೆ. ಅಖಿಲ ಭಾರತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ರಾಜ್ಯಕ್ಕೂ ಹಾಗೂ ತಾವು ಕಲಿತ ಶಿಕ್ಷಣ ಸಂಸ್ಥೆಗೂ ಕೀರ್ತಿ ತಂದಿದ್ದಾರೆ. ಈ ಫಲಿತಾಂಶವು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ ಸೇರಿಸಿದಂತಾಗಿದೆ ಎಂದು ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.

ಕಾಲೇಜಿನ ವಿದ್ಯಾರ್ಥಿ ಮೌರ್ಯ ವೈ.ಡಿ. 99.9783489 ಪರ್ಸೆಂಟೈಲ್ ಹಾಗೂ 673 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್ ಗಳಿಸಿದ್ದಾರೆ. ಚಿನ್ಮಯ್ ಎಲ್.ಆರ್. ಗೌಡ 99.9720985 ಪರ್ಸೆಂಟೈಲ್ ಹಾಗೂ 671 ಅಂಕಗಳನ್ನು ಪಡೆದು 331ನೇ ಅಖಿಲ ಭಾರತ ರ್ಯಾಂಕ್ ಗಳಿಸಿದ್ದಾರೆ.ಹಾಗೂ ಪಂಚಮ್ ಕೆ., ಆನಂದ್ ರೆಡ್ಡಿ ಬಿ.ಸಿ., ಗಗನದೀಪ್, ಕೆ.ಕೆ. ಸರ್ವಿಕ್, ತಸ್ಮಿಯ ಎನ್. ಸರ್ವದ್ ಹಾಗೂ ವಿದ್ಯಾಧರ ಬಿ.ಆರ್. ಅವರು ಕೂಡ ಗಮನಾರ್ಹ ಸಾಧನೆ ದಾಖಲಿಸಿದ್ದಾರೆ. PwBD ವಿಭಾಗದಲ್ಲಿ ಶ್ವೇತಾ ಎಂ. ನಾಗಾವಿ ಅಖಿಲ ಭಾರತ 79ನೇ ರ್ಯಾಂಕ್ ಹಾಗೂ ರೋಹಿತ್ ಆರ್.ಎಲ್. ಉತ್ತಮ ಸಾಧನೆ ಮಾಡಿದ್ದಾರೆ.

ಈ ಬಾರಿಯ ಫಲಿತಾಂಶದ ಮತ್ತೊಂದು ವಿಶೇಷವೆಂದರೆ, 300ಕ್ಕೂ ಹೆಚ್ಚು ವಿದ್ಯಾರ್ಥಿಗಳು 500ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು, ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ವೈದ್ಯಕೀಯ ಪದವಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ಇದು ಎಕ್ಸೆಲ್ ಕಾಲೇಜಿನ ಗುಣಮಟ್ಟದ ಶಿಕ್ಷಣ, ವ್ಯವಸ್ಥಿತ ತರಬೇತಿ ಹಾಗೂ ವಿದ್ಯಾರ್ಥಿ ಕೇಂದ್ರಿತ ಬೋಧನೆಯ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದರು.

ಈ ಅಭೂತಪೂರ್ವ ಸಾಧನೆಗೆ ಕಾರಣರಾದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಅಭಿವೃದ್ಧಿಗೆ ಕೈಜೋಡಿಸಿದ ಎಲ್ಲರಿಗೂ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಒಂದು ದಿನದ ಪುನರ್ಮನನ ಶಿಬಿರ

Suddi Udaya

ಉಜಿರೆ ರುಡ್‌ ಸೆಟ್ ಸಂಸ್ಥೆಯಲ್ಲಿ ವಿಶೇಷ ಸಂವಾದ ಕಾರ್ಯಕ್ರಮ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
error: Content is protected !!