23.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

ಮಂಗಳೂರು: ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ಜು.16 ರಂದು ಕೆಲಸ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುವಂಥದ್ದು. ಯುವಜನತೆ ಇಂತಹ ಹಿಂಸಾತ್ಮಕ ಹಾಗೂ ಕಾನೂನುಬಾಹಿರ ಕೃತ್ಯಗಳತ್ತ ಮುಖ ಮಾಡುತ್ತಿರುವುದು ತೀವ್ರ ಆತಂಕಕಾರಿ ಹಾಗೂ ನೋವಿನ ಸಂಗತಿಯಾಗಿದೆ. ಸಮಾಜದಲ್ಲಿ ಯಾರ ಭಯವೂ ಇಲ್ಲದೆ ಕಾನೂನು ಕೈಗೆತ್ತಿಕೊಂಡು ಅಟ್ಟಹಾಸ ಮೆರೆಯುವಂಥ ದುಷ್ಕರ್ಮಿಗಳ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕು. ಯುವಕರು ಅಡ್ಡದಾರಿ ಹಿಡಿದು ಅಪರಾಧ ಕೃತ್ಯ ಎಸಗುವ ಈ ರೀತಿಯ ಘಟನೆಗಳು ಮರುಕಳಿಸುತ್ತಿರುವುದು ಸಮಾಜಕ್ಕೆ ಎಚ್ಚರಿಕೆ ಗಂಟೆಯಾಗಿದ್ದು, ಸರ್ಕಾರ ಹಾಗೂ ಪೊಲೀಸ್ ಇಲಾಖೆಯು ಈ ನಿಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣವನ್ನು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಆದಷ್ಟು ಬೇಗ ಬಂಧಿಸಬೇಕು. ಅಲ್ಲದೆ, ಆತನಿಗೆ ಅತ್ಯಂತ ಕಠಿಣ ಹಾಗೂ ತ್ವರಿತವಾಗಿ ಶಿಕ್ಷೆಯಾಗುವಂತೆಯೂ ನೋಡಿಕೊಳ್ಳಬೇಕು. “ಮಗಳನ್ನು ಕಳೆದುಕೊಂಡ ಮೃತ ಲಾವಣ್ಯ ಅವರ ಕುಟುಂಬಕ್ಕೆ ಈ ಆಘಾತವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ,” ಎಂದು ಸಂಸದರು ವಿಷಾದ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!