27.5 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

ಮುಂಡಾಜೆ : “ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ಇಲ್ಲಿನ ಸನಾತನ ಪರಂಪರೆ,ಸಂಸ್ಕೃತಿ, ಭಾರತದ ಭವ್ಯ ವೈಭವವನ್ನು ಸಾರುವ ಶಿಕ್ಷಣದೊಂದಿಗೆ ಗುರು ಹಿರಿಯರನ್ನು ಗೌರವಿಸುವ ಗುಣಗಳನ್ನು ಹಾಗೂ ಕೌಟುಂಬಿಕ ಮೌಲ್ಯಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ “ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅಭಿಪ್ರಾಯಪಟ್ಟರು.

ಅವರು ಜು.16 ರಂದು ನಡೆದ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯ ಚಂದ್ರ, ಕಾಲೇಜಿನ ಸಂಚಾಲಕ ನಾರಾಯಣ ಫಡ್ಕೆ, ಪ್ರಾಂಶುಪಾಲೆ ಗೀತಾ ವೇದಿಕೆಯಲ್ಲಿ ಉಪಸಿತರಿದ್ದರು. ಸರಸ್ವತಿ ವಂದನೆಯೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಸಂಸ್ಥೆಯ ಹಾಗೂ ಇಲಾಖೆಯ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು. ಮನಶಾಸ್ತ್ರ ಉಪನ್ಯಾಸಕಿ ನಮಿತಾ ಕೆ ಆರ್ ಪ್ರತಿಭಾ ಪುರಸ್ಕಾರವನ್ನು ನಿರ್ವಹಿಸಿದರು. ವಿದ್ಯಾರ್ಥಿನಿಯರಾದ ಜನೀಕ್ಷಾ ಸ್ವಾಗತಿಸಿ, ದೀಕ್ಷಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಭರತ್ ವಂದಿಸಿದರು.

Related posts

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಧರ್ಮಸ್ಥಳ ಮೀಸಲು ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ: ಇಬ್ಬರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!