25.1 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುಗ್ರಹ ಪ್ರೌಢಶಾಲೆಯಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ

ಉಜಿರೆ: ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಸೇವನೆ ಹಾಗೂ ಉತ್ತಮ ಆರೋಗ್ಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ “Stay Fit, Stay Smart” ಎಂಬ ಆರೋಗ್ಯ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ ವಹಿಸಿ “ಆರೋಗ್ಯವೇ ಜೀವನದ ನಿಜವಾದ ಸಂಪತ್ತು. ಆರೋಗ್ಯವಂತ ವಿದ್ಯಾರ್ಥಿಗಳೇ ಉತ್ತಮ ಶಿಕ್ಷಣವನ್ನು ಪಡೆದು ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ನಾರಾಯಣ ಗುರು ಸೇವಾ ಸಂಘದ ನಿರ್ದೇಶಕಿ ಹಾಗೂ ಪ್ರಸ್ತುತ Wellness Coach ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಸುಜಾತಾ ಅಣ್ಣಿ ಪೂಜಾರಿ ಅವರು ಭಾಗವಹಿಸಿ, ಆರೋಗ್ಯಕರ ಜೀವನಶೈಲಿಯ ಮಹತ್ವ, ಪೌಷ್ಟಿಕ ಆಹಾರದ ಅಗತ್ಯತೆ, ಉತ್ತಮ ದಿನಚರಿ, ದೈಹಿಕ ವ್ಯಾಯಾಮ, ಮಾನಸಿಕ ಆರೋಗ್ಯ ಹಾಗೂ ಆರೋಗ್ಯಕರ ಆಹಾರ ಪದ್ಧತಿಯ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಆರೋಗ್ಯವನ್ನು ಕಾಪಾಡಿಕೊಳ್ಳಲು ಅಳವಡಿಸಿಕೊಳ್ಳಬೇಕಾದ ಉತ್ತಮ ಅಭ್ಯಾಸಗಳ ಬಗ್ಗೆ ಅವರು ಪ್ರಾಯೋಗಿಕ ಸಲಹೆಗಳನ್ನು ನೀಡಿದರು.

ವೇದಿಕೆಯಲ್ಲಿ ಚೈತನ್ಯ ಚಂದ್ರಶೇಖರ್ ಹಾಗೂ ಅಣ್ಣಿ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ಆರೋಗ್ಯಕರ ಜೀವನದ ಕುರಿತು ಅಮೂಲ್ಯ ಮಾಹಿತಿಯನ್ನು ಪಡೆದುಕೊಂಡರು.

ಕಾರ್ಯಕ್ರಮವನ್ನು ಶಾಲೆಯ ಸಹಶಿಕ್ಷಕರಾದ ಗಣೇಶ್ ನಿರೂಪಿಸಿ, ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.

Related posts

ಸಮಸ್ತ ಬೆಳ್ತಂಗಡಿ ಸಂಯುಕ್ತ ಜಮಾಅತ್ ಖಾಝಿಯಾಗಿ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್: ಕನ್ನಡಿಕಟ್ಟೆ ಮಸ್ಜಿದ್ ನಲ್ಲಿ ಕಾರ್ಯಕ್ರಮ ಸಂಪನ್ನ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಮಾರುತಿ ಸುಜುಕಿ ಶೋರೂಮ್ ನಲ್ಲಿ ನ್ಯೂ ಬ್ರೆಝಾ ಮಾರುಕಟ್ಟೆಗೆ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya
error: Content is protected !!