24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ


ಉಜಿರೆ: ಜ್ಞಾನ ದಾಸೋಹದಿಂದ ಆತ್ಮನ ಸಾಕ್ಷಾತ್ಕಾರವಾಗಿ ಭಗವಂತನ ಸಾನ್ನಿಧ್ಯದೊಂದಿಗೆ ಶಾಶ್ವತ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಕನ್ಯಾಡಿ ರಾಮಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅವರು ಜು.16 ರಂದು ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 55ನೇ ವರ್ಷದ ಪುರಾಣ-ಕಾವ್ಯ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುರಾಣ ಕಾವ್ಯ ವಾಚನ- ಪ್ರವಚನ ಅಮೂಲ್ಯ ಜ್ಞಾನಸತ್ರವಾಗಿದ್ದು, ಶ್ರೋತೃಗಳು ಆಧ್ಯಾತ್ಮದಲ್ಲಿ  ತೊಡಗಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ದೇಹ ನಶ್ವರ ಹಾಗೂ ಆತ್ಮ ಶಾಶ್ವತವಾಗಿದ್ದು ನಮ್ಮ ಕರ್ತವ್ಯ ಮತ್ತು ಕರ್ಮವನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ಮಾಡಬೇಕು. ಜ್ಞಾನಯೋಗ ಮತ್ತು ಕರ್ಮಯೋಗದಿಂದ ಮಾತ್ರ ಶಾಶ್ವತ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯಾಗುತ್ತದೆ. ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಅರಿಷಡ್ವರ್ಗಗಳನ್ನು ಗೆಲ್ಲಬೇಕು. ಆಗ ಮಾತ್ರ ಶ್ರದ್ಧಾ-ಭಕ್ತಯಿಂದ ಧರ್ಮದ ಮರ್ಮವನ್ನರಿತು ಸುಖ-ಶಾಂತಿ, ನೆಮ್ಮದಿ ಪಡೆಯಬಹುದು. “ಸಮ್ಯಕ್‌ದರ್ಶನ, ಜ್ಞಾನ, ಚಾರಿತ್ರಾಣಿ ಮೋಕ್ಷ ಮಾರ್ಗಃ” ಅಂದರೆ ರತ್ನತ್ರಯ ಧರ್ಮದ ಪಾಲನೆಯಿಂದ ಶಾಶ್ವತ ಸುಖ ಪಡೆಯಬಹುದು ಎಂಬ ಜೈನಧರ್ಮದ ಸಾರವನ್ನು ಸ್ವಾಮೀಜಿ ವಿಶೇಷವಾಗಿ ಉಲ್ಲೇಖಿಸಿದರು.

ಸಮಯ ಅಮೂಲ್ಯವಾಗಿದೆ, ಸದುಪಯೋಗ ಮಾಡಿ: ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಸಮಯ ಅಮೂಲ್ಯವಾಗಿದ್ದು ಅದರ ಸದುಪಯೋಗ ಮಾಡಬೇಕು. ಎಲ್ಲರಿಗೂ ಕಾಲಪ್ರಜ್ಞೆ ಇರಬೇಕು. ಧರ್ಮದ ಮರ್ಮವನ್ನರಿತು ಅನುಷ್ಠಾನ ಮಾಡಿದರೆ ಜೀವನ ಪಾವನವಾಗುತ್ತದೆ. ಧರ್ಮದಿಂದ ವಿಮುಖರಾದರೆ ಸರ್ವನಾಶವಾಗುತ್ತದೆ. ಪುರಾಣ ಕಾವ್ಯ ವಾಚನ-ಪ್ರವಚನದ ಮೂಲಕ ಸಮಯದ ಸದ್ವಿನಿಯೋಗ ಮಾಡಿಕೊಳ್ಳಿ ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಸ್ವಾಗತಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ಧನ್ಯವಾದವಿತ್ತರು.

Related posts

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಳಂಜ: ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ

Suddi Udaya
error: Content is protected !!