September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಅಳದಂಗಡಿಯಲ್ಲಿ ಆಯೋಜಿಸಲಾದ ತುಳುನಾಡ ಸಿಂಗಾರ ಕಾರ್ಯಕ್ರಮದ ಅಂಗವಾಗಿ ನಡೆದ ಮೂರರಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಯಶ್ವಿತ್ ಅಮೀನ್ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾನೆ.

ವಿದ್ಯಾರ್ಥಿಯ ಈ ಗಮನಾರ್ಹ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನ ಹಾಗೂ ಚಿತ್ರಕಲಾ ಶಿಕ್ಷಕ ಜಯರಾಮ್ ಪಿ. ಎಸ್. ಅವರ ಸಮರ್ಪಕ ತರಬೇತಿ ಮತ್ತು ಪ್ರೋತ್ಸಾಹ ಪ್ರಮುಖ ಕಾರಣವಾಗಿದೆ.

ವಿದ್ಯಾರ್ಥಿಯ ಈ ಸಾಧನೆಗೆ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು ಹಾಗೂ ಸಹಪಾಠಿಗಳು ಅಭಿನಂದನೆಗಳನ್ನು ಸಲ್ಲಿಸಿ, ಶುಭ ಹಾರೈಸಿದ್ದಾರೆ.

Related posts

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಕಳೆಂಜದಲ್ಲಿ ಗ್ರಾಮ ಸ್ವಚ್ಛತಾ ಅಭಿಯಾನ: ಕಳೆಂಜ ಕ್ರಿಶ್ಚಿಯನ್ ಬ್ರದರ್ಸ ನ ಸದಸ್ಯರು ಭಾಗಿ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya
error: Content is protected !!