24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಪರಮಪೂಜ್ಯ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರನ್ನು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಶಾಲು ಹೊದಿಸಿ ಗೌರವಿಸಿದರು. ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ಜನಮನ್ನಣೆ ಗಳಿಸಿರುವ ಹರೀಶ್ ಪೂಂಜರ ಸೇವೆಯನ್ನು ಸ್ವಾಮೀಜಿಯವರು ಶ್ಲಾಘಿಸಿ ಅಭಿನಂದಿಸಿದರು.

ಇದೇ ವೇಳೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನೂ ಶ್ರೀರಾಮ ಕ್ಷೇತ್ರದ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಚಿತ್ತರಂಜನ್ ಕಂಕನಾಡಿ, ಅಣ್ಣಿ ಪೂಜಾರಿ, ಸುಜಾತ ಅಣ್ಣಿ ಪೂಜಾರಿ, ತುಕರಾಮ್ ಸಾಲಿಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya
error: Content is protected !!