September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ಗುತ್ಯಡ್ಕದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆ

ಮಲವಂತಿಗೆ: ಪ್ರಕೃತಿಯ ಸುಂದರ ಮಡಿಲಲ್ಲಿರುವ ಎಳನೀರು ಪ್ರದೇಶದ ಇನ್ನಷ್ಟು ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮದಿಂದ ಪ್ರಕೃತಿಗೆ ಹಾನಿಯಾಗಬಾರದು, ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದುವರಿಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಅವರು ಮಲವಂತಿಗೆ ಗ್ರಾಮದ ಎಳನೀರು ಸಮೀಪದ ಗುತ್ಯಡ್ಕದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಶಾಸಕ ಹರೀಶ್ ಪೂಂಜ ಸುಮಾರು 13 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದು ಶ್ಲಾಘನೀಯ. ದೇಶದ ಅಭಿವೃದ್ಧಿಯಲ್ಲಿ ಹಳ್ಳಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಶಾಸಕ ಹರೀಶ್ ಪೂಂಜ ಮಾತನಾಡಿ ಮುಂದಿನ ದಿನಗಳಲ್ಲಿ ಇಲ್ಲಿ ಹಂತ-ಹಂತವಾಗಿ ಇನ್ನಷ್ಟು ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಊರಿನವರು ಒಗ್ಗಟ್ಟಿನೊಂದಿಗೆ ಮುಂದುವರಿದು ಪರಸ್ಪರ ಅನ್ಯೋನ್ಯತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವುದು ಅಗತ್ಯ ಎಂದರು. ಮಲವಂತಿಗೆ ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶ್ ಜೈನ್, ಪ್ರಮುಖರಾದ ಗಣೇಶ್ ನಾವೂರು, ಅರವಿಂದ ಲಾಯಿಲ, ದಿನೇಶ್ ಗೌಡ, ಮಧುಸೂದನ್ ಮಲ್ಲ, ಗಣೇಶ್ ಗೌಡ, ಬಿಎಸ್ಸೆನ್ನೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ನೇತ್ರಾವತಿ ಪೀಕ್ ಪರಿಶೀಲನೆ: ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ನೇತ್ರಾವತಿ ಪೀಕ್ ಪ್ರದೇಶದ ಪರಿಶೀಲನೆ ನಡೆಸಿದರು. ಸುಮಾರು 10 ಕಿ.ಮೀ. ದುರ್ಗಮ ಪ್ರದೇಶವನ್ನು ಕಾಲ್ನಡಿಗೆ ಮೂಲಕ ಕ್ರಮಿಸಿ ಇಲ್ಲಿನ ಪರಿಸ್ಥಿತಿ ಅವಲೋಕಿಸಿದರು. ವನ್ಯಜೀವಿ ವಿಭಾಗದ ಅಧಿಕಾರಿಗಳಿಗೆ ಕೆಲವೊಂದು ಸಲಹೆ- ಸೂಚನೆಗಳನ್ನು ನೀಡಿದರು. ಇಲ್ಲಿನ ಅಭಿವೃದ್ಧಿ ಕುರಿತು ಯೋಜನೆ ರೂಪಿಸುವುದಾಗಿ ತಿಳಿಸಿದರು.

Related posts

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya
error: Content is protected !!