September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ನಿನ್ನೆ(ಜು.19) ಬೆಳಿಗ್ಗೆ ವೇಣೂರು ಮುಖ್ಯಪೇಟೆಯಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಜು.20ರಂದು ನಡೆದಿದೆ.

ಬಜಿರೆ ಗ್ರಾಮದ ಕಂಗಿತ್ತಿಲು ನಿವಾಸಿ ಆನಂದ ಪೂಜಾರಿ (60ವ) ಮೃತಪಟ್ಟಿರುವ ದುರ್ದೈವಿ. ವೇಣೂರು ಮುಖ್ಯಪೇಟೆಯ ಬಸ್ ನಿಲ್ದಾಣದ ಬಳಿ ಹೆದ್ದಾರಿ ದಾಟುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಮೂಡುಬಿದಿರೆ ಕಡೆಗೆ ಸಾಗುತ್ತಿದ್ದ ಟೂರಿಸ್ಟ್ ಟೆಂಪೋ ಟ್ರಾವೆಲ್ಲರ್ (ಕೆ.ಎ. ೦೨, ಎಬಿ೦೬೬೭) ಡಿಕ್ಕಿಯೊಡೆಯಿತು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಇವರನ್ನು ವೇಣೂರಿನ ನಮನ ಕ್ಲಿನಿಕ್‌ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಲಾಗಿತ್ತು. ಆದರೆ ಸಂಜೆವೇಳೆಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಟ್ರಾವೆಲ್ಲರ್ ಅನ್ನು ವಶಕ್ಕೆ ಪಡೆದುಕೊಂಡಿರುವ ವೇಣೂರು ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸುಮಾರು ವರ್ಷಗಳ ಹಿಂದೆ ವೇಣೂರಿನಲ್ಲಿ ಟೈಲರಿಂಗ್ ವೃತ್ತಿ ನಡೆಸುತ್ತಿದ್ದ ಇವರು ಉತ್ತಮ ಟೈಲರ್ ಎಂದು ಪ್ರಸಿದ್ಧಿ ಪಡೆದಿದ್ದರು. ಪ್ರಸ್ತುತ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಇವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!