24.1 C
ಪುತ್ತೂರು, ಬೆಳ್ತಂಗಡಿ
September 6, 2026
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿಯನ್ನು ಉಪ್ಪಿನಂಗಡಿ ನಿವಾಸಿ ಶುಭರಾಜ್(28) ಎಂಬಾತ ಪುಸಲಾಯಿಸಿ ಬಲವಂತವಾಗಿ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಬಾಲಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿದಾಗ ಬಾಲಕಿ 5-6 ತಿಂಗಳ ಗರ್ಭಿಣಿಯಾಗಿದ್ದಾಳೆ‌ ಎಂದು ತಿಳಿದುಬಂದಿದೆ.

ಈ ಬಗ್ಗೆ ಬಾಲಕಿ ತಾಯಿ ನೀಡಿದ ದೂರಿನ ಜು.18 ರಂದು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿ ಶುಭರಾಜ್(28) ನನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಜು‌.19 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ ಜು.20 ರಂದು ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದ್ದು.ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Related posts

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya
error: Content is protected !!