September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮ್ಯಾಟ್ರಿಮೋನಿ ಆ್ಯಪ್‌ ಮೂಲಕ  ಪರಿಚಯವಾದ ಯುವತಿಯಿಂದ ಕೊಯ್ಯೂರಿನ ಉದ್ಯಮಿಗೆ ರೂ.87 ಲಕ್ಷ ವಂಚನೆ: ಪ್ರಕರಣ ದಾಖಲು

ಬೆಳ್ತಂಗಡಿ : ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ ರೂ., 87 ಲಕ್ಷ ಪಡೆದು ವಂಚಿಸಿರುವ ಆರೋಪ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನ ಸಾರಾಂಶ: ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಉದ್ಯಮಿ ಅನನ್ಯಕೃಷ್ಣ (36) ಎಂಬವರಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಮೂಲಕ ಶಿವಮೊಗ್ಗ/ಬೆಂಗಳೂರು ಮೂಲದ ಅನಿಷಾ ಪಾಲನ್ನ (35) ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಇನ್‌ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, ಮದುವೆಯಾಗುವ ಕುರಿತು ಮೊಬೈಲ್ ನಲ್ಲಿ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಆರೋಪಿತೆ ವ್ಯವಹಾರದಲ್ಲಿ ಆರ್ಥಿಕ ತೊಂದರೆ ಉಂಟಾಗಿದೆ ಎಂದು ಹೇಳಿ ವಿವಿಧ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ಹಾಗೂ ತನ್ನ ಖಾತೆ ಮತ್ತು ಗೂಗಲ್ ಪೇ ಮೂಲಕ ಹಂತ ಹಂತವಾಗಿ ಹಣ ವರ್ಗಾಯಿಸಿಕೊಳ್ಳುತ್ತಿದ್ದಳು. ಜೊತೆಗೆ ಬೆಂಗಳೂರಿನಲ್ಲಿ ತನ್ನ ಪರವಾಗಿ ಬಂದ ವ್ಯಕ್ತಿಯ ಮೂಲಕ ಲಕ್ಷಾಂತರ ರೂಪಾಯಿ ಹಣವನ್ನೂ ಅನನ್ಯ ಕೃಷ್ಣ ಅವರಿಂದ ಪಡೆದುಕೊಂಡಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಒಟ್ಟಾರೆ ವಿವಿಧ ಹಂತಗಳಲ್ಲಿ 87,22,710 ರೂಪಾಯಿ ಪಡೆದುಕೊಂಡ ಬಳಿಕ ಆರೋಪಿತೆ ಅನಿಷಾ ಪಾಲನ್ನ ಮೊಬೈಲ್ ಸಂಪರ್ಕಕ್ಕೂ ಸಿಗದೆ, ಹಣವನ್ನು ಹಿಂದಿರುಗಿಸದೇ ವಂಚಿಸಿರುವುದಾಗಿ ದೂರುದಾರರು ತಿಳಿಸಿದ್ದಾರೆ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 318(4) ಅಡಿಯಲ್ಲಿ ಜು.18 ರಂದು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!